ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರು ಕೆಫೆ ಸ್ಫೋಟ ಪ್ರಕರಣ; ಮೂವರನ್ನು ವಶಕ್ಕೆ ಪಡೆದ NIA

ಇಲ್ಲಿನ ದಿ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಶಂಕಿತ ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಕಸ್ಟಡಿಗೆ ಪಡೆದುಕೊಂಡಿದೆ.
07:06 PM Mar 08, 2024 IST | Maithri S

ಬೆಂಗಳೂರು: ಇಲ್ಲಿನ ದಿ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಶಂಕಿತ ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಕಸ್ಟಡಿಗೆ ಪಡೆದುಕೊಂಡಿದೆ.

Advertisement

ಈಗಾಗಲೇ ಬಳ್ಳಾರಿಯ ಮಿನಾಜ್‌ ಅಲಿಯಾಸ್‌ ಸುಲೇಮಾನ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಮತ್ತೆ ಬಳ್ಳಾರಿಯ ಸೈಯದ್‌ ಸಮೀರ್‌(19), ಮುಂಬೈನ ಅನಾಸ್‌ ಇಕ್ಬಾಲ್‌ ಶೇಖ್‌(23) ಮತ್ತು ದೆಹಲಿಯ ಶಯಾನ್‌ ರಹಮಾನ್‌ ಅಲಿಯಾಸ್‌ ಹುಸೈನ್‌(26)ನನ್ನು ಎನ್.ಐ.ಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಐಎಸ್‌ ನೊಂದಿಗೆ ನಂಟು ಹೊಂದಿದ್ದ ಶಂಕಿತರು ದೇಶದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಸಂಗ್ರಹಿಸಿದ NIA ಅಧಿಕಾರಿಗಳು ಕಳೆದ ಡಿ.೧೮ರಂದು ದಾಳಿ ನಡೆಸಿದರು. ಮಿನಾಜ್‌ ಮತ್ತು ಇತರನ್ನು ಬಂಧಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಇರಿಸಲಾಗಿತ್ತು.

Advertisement

Advertisement
Tags :
indiaLatestNewsNewsKannadaNIAಕರ್ನಾಟಕಬೆಂಗಳೂರು
Advertisement
Next Article