For the best experience, open
https://m.newskannada.com
on your mobile browser.
Advertisement

ಭಯೋತ್ಪಾದನೆ: ಶ್ರೀನಗರದ 9 ಕಡೆ ಎನ್‌ಐಎ ದಾಳಿ

ಭಯೋತ್ಪಾದನೆ ಚಟುವಟಿಕೆಗಳ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ಇಂದು ಜಮ್ಮು-ಕಾಶ್ಮೀರದ ಶ್ರೀನಗರದ ಒಂಬತ್ತು ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
05:53 PM Apr 22, 2024 IST | Ashitha S
ಭಯೋತ್ಪಾದನೆ  ಶ್ರೀನಗರದ 9 ಕಡೆ ಎನ್‌ಐಎ ದಾಳಿ

ಶ್ರೀನಗರ: ಭಯೋತ್ಪಾದನೆ ಚಟುವಟಿಕೆಗಳ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ಇಂದು ಜಮ್ಮು-ಕಾಶ್ಮೀರದ ಶ್ರೀನಗರದ ಒಂಬತ್ತು ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Advertisement

ಈ ಕಾರ್ಯಾಚರಣೆಯಲ್ಲಿ ಸ್ಥಳೀಯ ಪೊಲೀಸರು ಮತ್ತು ಸಿಆರ್‌ಪಿಎಫ್ ಸಿಬ್ಬಂದಿಯೂ ಪಾಲ್ಗೊಂಡಿದ್ದರು.

2022ರಲ್ಲಿ ಎನ್‌ಐಎ ದಾಖಲಿಸಿಕೊಂಡ ಪ್ರಕರಣದ ಪ್ರಕಾರ ಭಯೋತ್ಪಾದನೆಯಲ್ಲಿ ಭಾಗಿಯಾಗಿರುವ ಶಂಕಿತರು ದಿ ರೆಸಿಸ್ಟಂಟ್ ಫ್ರಂಟ್ (ಟಿಆರ್‌ಎಫ್) ಮತ್ತು ಲಷ್ಕರ್-ಎ-ತಯಬಾ ಸಂಘಟನೆಗಳ ಜೊತೆ ನಂಟು ಹೊಂದಿದ್ದಾರೆ.

Advertisement

ಹೀಗಾಗಿ ಪ್ರಕರಣದಲ್ಲಿ ಭಾಗಿಯಾಗಿದ್ದವರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Tags :
Advertisement