ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

9ನೇ ಬಾರಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

ಅನಿರೀಕ್ಷಿತ ಹಾಗೂ ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ಮಧ್ಯೆ ಬಿಹಾರ ರಾಜ್ಯದಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿಯ ಸರ್ಕಾರ ಮತ್ತೆ ಅಸ್ತಿತ್ವಕ್ಕೆ ಬಂದಿದೆ. ನಿತೀಶ್ ಕುಮಾರ್  ಬಿಹಾರದಲ್ಲಿ 9 ನೇ ಬಾರಿ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ.
06:10 PM Jan 28, 2024 IST | Ashitha S

ಪಾಟ್ನಾ: ಅನಿರೀಕ್ಷಿತ ಹಾಗೂ ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ಮಧ್ಯೆ ಬಿಹಾರ ರಾಜ್ಯದಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿಯ ಸರ್ಕಾರ ಮತ್ತೆ ಅಸ್ತಿತ್ವಕ್ಕೆ ಬಂದಿದೆ. ನಿತೀಶ್ ಕುಮಾರ್  ಬಿಹಾರದಲ್ಲಿ 9 ನೇ ಬಾರಿ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ.

Advertisement

ಬಿಹಾರ ರಾಜಧಾನಿ ಪಾಟ್ನಾದ ರಾಜಭವನದಲ್ಲಿ ಇಂದು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರು ಭಾನುವಾರ (ಜ. 28) ನಿತೀಶ್ ಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಇದೇ ವೇಳೆ ಬಿಜೆಪಿ ಶಾಸಕ ಸಾಮ್ರಾಟ್ ಚೌಧರಿ ಅವರು ನೂತನ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಜಯ್ ಕುಮಾರ್ ಸಿನ್ಹಾ, ಡಾ. ಪ್ರೇಮ್ ಕುಮಾರ್, ವಿಜಯ್ ಕುಮಾರ್ ಚೌಧರಿ, ವಿಜೇಂದ್ರ ಪ್ರಸಾದ್ ಯಾದವ್, ಶ್ರವಣ್ ಕುಮಾರ್, ಸಂತೋಷ್ ಸುಮನ್ ಮತ್ತು ಸುಮಿತ್ ಕುಮಾರ್ ಸಿಂಗ್ ಅವರು ನೂತನ ಮೈತ್ರಿಸರ್ಕಾರದಲ್ಲಿ ಸಚಿವರಾಗಿ ಪದಗ್ರಹಣ ಮಾಡಿದ್ದಾರೆ. ರಾಜ್ಯಪಾಲರು ಇಂದು ಇವರೆಲ್ಲರಿಗೂ ಪ್ರಮಾಣವಚನ ಬೋಧಿಸಿದ್ದಾರೆ.

Advertisement

Advertisement
Tags :
GOVERNMENTindiaನಿತೀಶ್ ಕುಮಾರ್ಬಿಹಾರ
Advertisement
Next Article