ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಆಸ್ತಿ ತೆರಿಗೆಯಲ್ಲಿ ಹೆಚ್ಚಳವಿಲ್ಲ, ಸುಳ್ಳು ಸುದ್ದಿ ನಂಬಬೇಡಿ: ತುಷಾರ್‌ ಗಿರಿನಾಥ್‌

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಏಪ್ರಿಲ್‌ 1ರಿಂದ ಯಾವುದೇ ಆಸ್ತಿ ತೆರಿಗೆ ಹೆಚ್ಚಳವಾಗುವುದಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಯ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹರಿಬಿಡುತ್ತಿದ್ದು, ಇಂತಹ ಸುದ್ದಿಗಳಿಗೆ ಯಾರು ಕೂಡ ಕಿವಿಗೊಡಬೇಡಿ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
04:46 PM Mar 25, 2024 IST | Chaitra Kulal

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಏಪ್ರಿಲ್‌ 1ರಿಂದ ಯಾವುದೇ ಆಸ್ತಿ ತೆರಿಗೆ ಹೆಚ್ಚಳವಾಗುವುದಿಲ್ಲ. ಈ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಯ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹರಿಬಿಡುತ್ತಿದ್ದು, ಇಂತಹ ಸುದ್ದಿಗಳಿಗೆ ಯಾರು ಕೂಡ ಕಿವಿಗೊಡಬೇಡಿ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Advertisement

ಸುಳ್ಳು ಸುದ್ದಿ ಅಪ್‌ಲೋಡ್‌ ಮಾಡಿ ಜಾಲತಾಣದಲ್ಲಿ ಹರಿಬಿಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್‌ ಆಯುಕ್ತರನ್ನು ಕೋರಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ನೀಡಿರುವ ತುಷಾರ್‌ ಗಿರಿನಾಥ್‌, ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಲಾಗುತ್ತಿದೆ ಎಂಬ ಸುದ್ದಿ ಬಿಬಿಎಂಪಿಯ ಗಮನಕ್ಕೆ ಬಂದಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯಲ್ಲಿ ಯಾವುದೇ ಹೆಚ್ಚಳ ಮಾಡುತ್ತಿಲ್ಲ. ತೆರಿಗೆ ಹೆಚ್ಚಳ ಬಗ್ಗೆ ಆತಂಕ ಪಡುವ ಆಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜಾಲತಾಣದಲ್ಲಿ ಸುಳ್ಳು ಸುದ್ದಿಗಳು ಹರಿದಾಡುದರ ಮೇಲೆ ಸಾರ್ವಜನಿಕರು ಜಾಗೃತರಾಗಿರಬೇಕು. ಪಾಲಿಕೆ ಆಸ್ತಿ ತೆರಿಗೆ ವಿಚಾರದಲ್ಲಿ ಸುಳ್ಳು ಸುದ್ದಿ ಹರಿಬಿಡುವವರ ಮೇಲೆ ನಿಯಮಾನುಸಾರ ಕಾನೂನು ಕ್ರಮ ವಹಿಸಲು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಪತ್ರ ಬರೆಯಲಾಗಿದೆ.ನಾಗರೀಕರು ಇಂತಹ ಯಾವುದೇ ಸುಳ್ಳು ಸುದ್ದಿಗಳಿಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌  ಹೇಳಿದರು.

Advertisement

Advertisement
Tags :
BBMPFAKE NEWSLatestNewsNewsKarnatakaPROPERTY TAXTushar Girinathಬೆಂಗಳೂರು
Advertisement
Next Article