For the best experience, open
https://m.newskannada.com
on your mobile browser.
Advertisement

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ, ಮೌನವಾಗಿ ದಿನ ಕಳೆದಿದ್ದಾರೆ. ಇನ್ನು ಮೂರು ದಿನ ಅವರನ್ನು ಆಪ್ತರೂ ಭೇಟಿಯಾಗುವಂತಿಲ್ಲ.
09:42 AM May 10, 2024 IST | Chaitra Kulal
ಜೈಲಿನಲ್ಲಿರುವ ಮಾಜಿ ಸಚಿವ ಎಚ್‌ ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ, ಮೌನವಾಗಿ ದಿನ ಕಳೆದಿದ್ದಾರೆ. ಇನ್ನು ಮೂರು ದಿನ ಅವರನ್ನು ಆಪ್ತರೂ ಭೇಟಿಯಾಗುವಂತಿಲ್ಲ.

Advertisement

ರೇವಣ್ಣ ಅವರನ್ನು ಆಪ್ತರು ಬಂದು ಪ್ರತಿದಿನ ಭೇಟಿಯಾಗುತ್ತಿದ್ದರು. ಆದರೆ ಇಂದು ಸೇರಿದಂತೆ ಮೂರು ದಿನ ರೇವಣ್ಣ ಯಾರನ್ನೂ ಭೇಟಿ ಮಾಡಲು ಸಾಧ್ಯವಿಲ್ಲದಾಗಿದೆ. ಇಂದು ಅಕ್ಷಯ ತೃತೀಯ ಸರ್ಕಾರಿ ರಜೆ, ನಾಳೆ ಎರಡನೇ ಶನಿವಾರ ರಜೆ, ನಾಡಿದು ಭಾನುವಾರ ಹೀಗೆ ಮೂರು ದಿನ ಸರ್ಕಾರಿ ರಜೆ ಹಿನ್ನೆಲೆಯಲ್ಲಿ, ಮೂರು ದಿನ ಜೈಲು ಬಂಧಿಗಳ ಭೇಟಿಗೆ ಅವಕಾಶವಿಲ್ಲ.

ಸಾಮಾನ್ಯ ವಿಚಾರಣಾಧೀನ ಕೈದಿಯಂತೆ ದಿನ ಕಳೆಯುತ್ತಿರುವ ರೇವಣ್ಣ ಅವರಿಗೆ ನಿನ್ನೆ ಜಾಮೀನು ಸಿಗದೆ ನಿರಾಸೆಯಾಗಿದೆ. ಬೇಲ್ ಸಿಗದ ಹಿನ್ನೆಲೆಯಲ್ಲಿ ಮತ್ತಷ್ಟು ಮಂಕಾಗಿರುವ ರೇವಣ್ಣ ಆಪ್ತರ ಭೇಟಿ ವೇಳೆ ಬೇಸರ ಹೊರಹಾಕಿದ್ದಾರೆ. ಹೊಟ್ಟೆ ನೋವು ಹಿನ್ನೆಲೆಯಲ್ಲಿ ರೇವಣ್ಣ ಮೇಲೆ ವೈದ್ಯರು ನಿಗಾ ಇಟ್ಟಿದ್ದಾರೆ. ಬೆಳಗ್ಗೆ ಮತ್ತು ಸಂಜೆ ವೇಳೆ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.

Advertisement

“ಈ ಪ್ರಕರಣದಲ್ಲಿ ನಾನಿಲ್ಲ ಅಂದಾಗ ಹೀಗಾದಾಗ ಮನಸ್ಸಿನಲ್ಲಿ ಬೇಜಾರಾಗುತ್ತೆ. ಸೋಮವಾರ ಏನಾಗುತ್ತೆ ನೋಡೋಣ. ನ್ಯಾಯ ದೊರಕುತ್ತೆ ಅನ್ನೋದು ಅವರ ಅಭಿಪ್ರಾಯ” ಎಂದು ಗುರುವಾರ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೇವಣ್ಣರನ್ನು ಭೇಟಿಯಾಗಿ ಬಂದ ಬಳಿಕ ಶಾಸಕ ಸಿ.ಎನ್ ಬಾಲಕೃಷ್ಣ ಹೇಳಿದ್ದಾರೆ.

ಎಚ್.ಡಿ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್, ಸೋಮವಾರ ಬೆಳಗ್ಗೆ 11.30ಕ್ಕೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸುವುದಾಗಿ ಮುಂದೂಡಿದೆ. ಕೋರ್ಟ್‌ಗೆ ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ.

ಸೋಮವಾರ ಸಮಯ ವ್ಯರ್ಥ ಮಾಡದೆ ಮಾಹಿತಿ ನೀಡುತ್ತೇವೆ. ಸೋಮವಾರದವರೆಗೆ ವಿಚಾರಣೆ ಮುಂದೂಡಬೇಕೆಂದು ವಿಶೇಷ ಸಾರ್ವಜನಿಕ ಅಭಿಯೋಜಕರು (ಎಸ್‌ಪಿಪಿ) ನ್ಯಾಯಾಧೀಶರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸೋಮವಾರಕ್ಕೆ ಮುಂದೂಡಿಕೆ ಮಾಡಿ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆದೇಶವನ್ನು ನೀಡಿದ್ದಾರೆ.

Advertisement
Tags :
Advertisement