ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ಇಲ್ಲ

ಕಳೆದ ಕೆಲವರ್ಷಗಳಿಂದ ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ಭಾರಿ ವಿವಾದ ಸೃಷ್ಟಿಸಿತ್ತು. ಟಿಪ್ಪು ಜಯಂತಿ ಆಚರಣೆಯನ್ನು 2019ರಲ್ಲೇ ಹಿಂಪಡೆಯಲಾಗಿತ್ತು.
09:10 PM Nov 09, 2023 IST | Ashika S

ಬೆಂಗಳೂರು: ಕಳೆದ ಕೆಲವರ್ಷಗಳಿಂದ ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ಭಾರಿ ವಿವಾದ ಸೃಷ್ಟಿಸಿತ್ತು. ಟಿಪ್ಪು ಜಯಂತಿ ಆಚರಣೆಯನ್ನು 2019ರಲ್ಲೇ ಹಿಂಪಡೆಯಲಾಗಿತ್ತು.

Advertisement

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೂ ಆಚರಣೆ ರದ್ದತಿ ಆದೇಶವನ್ನು ಹಿಂಪಡೆದಿಲ್ಲ. ಹೀಗಾಗಿ ಸರ್ಕಾರದಿಂದ ಅಧಿಕೃತವಾಗಿ ಟಿಪ್ಪು ಜಯಂತಿ ಆಚರಣೆ ಇಲ್ಲ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲೂ ಚರ್ಚೆ ನಡೆದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್​ಕೆ ಪಾಟೀಲ್ ಹೇಳಿದ್ದಾರೆ.

ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಬಾರಿ ಸರ್ಕಾರ ಅಧಿಕಾರಕ್ಕೆ ಬಂದಾಗ ಟೀಕೆ, ವಿರೋಧಗಳ ನಡುವೆ ಟಿಪ್ಪು ಜಯಂತಿ ಆಚರಣೆಯನ್ನು ಜಾರಿಗೆ ತರಲಾಗಿತ್ತು. ಇದನ್ನು ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ (2019 ರಲ್ಲಿ) ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಇದೀಗ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರೂ 2019ರಲ್ಲಿ ಟಿಪ್ಪು ಜಯಂತಿ ಆಚರಣೆ ರದ್ದತಿ ಆದೇಶವನ್ನು ಹಿಂಪಡೆದಿಲ್ಲ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕೃತವಾಗಿ ಟಿಪ್ಪು ಜಯಂತಿ ಆಚರಣೆ ಇಲ್ಲ. ಕ್ಯಾಬಿನೆಟ್​ನಲ್ಲೂ ಟಿಪ್ಪು ಜಯಂತಿ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಪಾಟೀಲ್‌ ಸ್ಪಷ್ಟನೆ ನೀಡಿದ್ದಾರೆ.

Advertisement

Advertisement
Tags :
LatetsNewsNewsKannadaಆಚರಣೆಟಿಪ್ಪು ಜಯಂತಿರಾಜ್ಯವಿವಾದ
Advertisement
Next Article