ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಿವಾದಾತ್ಮ ಹೇಳಿಕೆ: ಕೆ.ಎಸ್ ಈಶ್ವರಪ್ಪ ವಿರುದ್ಧ ನೋಟಿಸ್ ಜಾರಿ

ಡಿ.ಕೆ.ಸುರೇಶ್ ಮತ್ತು ವಿನಯ್​ ಕುಲಕರ್ಣಿ ಅಂತವರನ್ನ ಗುಂಡಿಟ್ಟು ಕೊಲ್ಲಬೇಕೆಂಬ ವಿವಾದಾತ್ಮ ಹೇಳಿಕೆ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ದಾವಣಗೆರೆ ಬಡಾವಣೆ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
10:37 AM Feb 10, 2024 IST | Ashika S

ಬೆಂಗಳೂರು: ಡಿ.ಕೆ.ಸುರೇಶ್ ಮತ್ತು ವಿನಯ್​ ಕುಲಕರ್ಣಿ ಅಂತವರನ್ನ ಗುಂಡಿಟ್ಟು ಕೊಲ್ಲಬೇಕೆಂಬ ವಿವಾದಾತ್ಮ ಹೇಳಿಕೆ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ದಾವಣಗೆರೆ ಬಡಾವಣೆ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

Advertisement

ಆರ್‌ಆರ್ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಶಶಾಂಕ್ ಹಾಗೂ ಸಂಜಯ್ ಅವರು ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಭಯೋತ್ಪಾದನೆ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳುವಂತೆ ಆಗ್ರಹಿಸಿದರು.

ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಕೆ.ಎಸ್.ಈಶ್ವರಪ್ಪ ನಿವಾಸಕ್ಕೆ ಇಂದು ಬೆಳಗ್ಗೆ 8:30 ಸುಮಾರಿಗೆ ಆಗಮಿಸಿದ ಪೊಲೀಸರು ನೋಟಿಸ್ ನೀಡಿದ್ದಾರೆ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಕಲಂ 505 (1), (ಸಿ), 505 (2) 506 ಐಪಿಸಿ ಪ್ರಕರಣ ದಾಖಲಾಗಿದೆ.

Advertisement

ಫೆಬ್ರವರಿ 08 ರಂದು ದಾವಣಗೆರೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭ ನಡೆದಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡುವಾಗ ಕೆಎಸ್​ ಈಶ್ವರಪ್ಪ “ಸಂಸದ ಡಿಕೆ ಸುರೇಶ್ ಹಾಗೂ ಶಾಸಕ ವಿನಯ ಕುಲಕರ್ಣಿ ಮಾದರಿ ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತನ್ನಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಗ್ರಹಿಸಿದ್ದರು.

Advertisement
Tags :
LatetsNewsNewsKannadaಗುಂಡಿಟ್ಟು ಕೊಲ್ಲಬೇಕೆಂಬಡಿ.ಕೆ. ಸುರೇಶ್ವಿನಯ್ ಕುಲಕರ್ಣಿವಿವಾದಾತ್ಮಹೇಳಿಕೆ
Advertisement
Next Article