ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಟ ದರ್ಶನ್‌ಗೆ ರಾಜ್ಯ ಮಹಿಳಾ ಆಯೋಗದಿಂದ ನೋಟಿಸ್‌

ನಟ ದರ್ಶನ್ ಅವರಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದಿಂದ ನೋಟಿಸ್ ಜಾರಿಯಾಗಿದೆ. ಹೆಣ್ಣು ಮಕ್ಕಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ನೋಟಿಸ್ ತಲುಪಿದ 10 ದಿನದಲ್ಲಿ ಬಂದು ವಿವರಣೆ ನೀಡಲು ಸೂಚನೆ ನೀಡಲಾಗಿದೆ.
12:35 PM Mar 01, 2024 IST | Ashitha S

ಬೆಂಗಳೂರು: ನಟ ದರ್ಶನ್ ಅವರಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದಿಂದ ನೋಟಿಸ್ ಜಾರಿಯಾಗಿದೆ. ಹೆಣ್ಣು ಮಕ್ಕಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ನೋಟಿಸ್ ತಲುಪಿದ 10 ದಿನದಲ್ಲಿ ಬಂದು ವಿವರಣೆ ನೀಡಲು ಸೂಚನೆ ನೀಡಲಾಗಿದೆ.

Advertisement

ನಟ ದರ್ಶನ್ ಚಿತ್ರರಂಗಕ್ಕೆ ಬಂದು 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಬೆಳ್ಳಿ ಪರ್ವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಾರ್ವಜನಿಕ ಸಮಾರಂಭದಲ್ಲಿ ದರ್ಶನ್ ಅವರು ಹೆಣ್ಣು ಮಕ್ಕಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಗೌಡತಿಯರ ಸೇನೆ ಮಹಿಳಾ ಆಯೋಗಕ್ಕೆ ದೂರು ನೀಡಿತ್ತು.

ಹೆಣ್ಣು ಮಕ್ಕಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಪ್ರತಿಭಟನೆ ನಡೆಸಿದ್ದ ಗೌಡತಿಯರ ಸೇನೆ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಗೌಡತಿಯರ ಸೇನೆ ರಾಜ್ಯಾಧ್ಯಕ್ಷರಾದ ಶ್ರೀಮತಿ ರೇಣುಕಾ ಅವರ ದೂರಿನ ಮೇರೆಗೆ ರಾಜ್ಯ ಮಹಿಳಾ ಆಯೋಗ ದರ್ಶನ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ 10 ದಿನದಲ್ಲಿ ಈ ಕುರಿತು ವಿವರಣೆ ನೀಡಲು ಸೂಚಿಸಲಾಗಿದೆ.

Advertisement

 

Advertisement
Tags :
GOVERNMENTindiaKARNATAKALatestNewsNewsKannadaNOTICESANDALWOODದರ್ಶನ್ಬೆಂಗಳೂರುಮಂಗಳೂರು
Advertisement
Next Article