ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಧಿಕಾರಿಗಳು ಹಾಗೂ ಸಿಬ್ಬಂದಿ ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸಿ :ಜಿಲ್ಲಾಧಿಕಾರಿ ದಿವ್ಯ ಪ್ರಭು

ಬರಪೀಡಿತವೆಂದು ಘೋಷಣೆಯಾದ ಕಲಘಟಗಿ ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ಮೇವು ಸೇರಿದಂತೆ ಗ್ರಾಮಸ್ಥರಿಗೆ ಯಾವುದೇ ರೀತಿಯ ಸಮಸ್ಯೆ ಕಂಡುಬಂದಲ್ಲಿ ಗ್ರಾಮ ಮಟ್ಟದ ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕಾರ್ಯ ನಿರ್ವಹಿಸುವಂತೆ ದಿವ್ಯ ಪ್ರಭು ಅವರು ತಿಳಿಸಿದರು.
06:29 PM Mar 26, 2024 IST | Chaitra Kulal

ಧಾರವಾಡ : ಬರಪೀಡಿತವೆಂದು ಘೋಷಣೆಯಾದ ಕಲಘಟಗಿ ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ಮೇವು ಸೇರಿದಂತೆ ಗ್ರಾಮಸ್ಥರಿಗೆ ಯಾವುದೇ ರೀತಿಯ ಸಮಸ್ಯೆ ಕಂಡುಬಂದಲ್ಲಿ ಗ್ರಾಮ ಮಟ್ಟದ ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕಾರ್ಯ ನಿರ್ವಹಿಸುವಂತೆ ದಿವ್ಯ ಪ್ರಭು ಅವರು ತಿಳಿಸಿದರು.

Advertisement

ನೀರಸಾಗರ ಹಾಗೂ ಬೆಣಚಿ ಕೆರೆ ವೀಕ್ಷಣೆ ಸೇರಿದಂತೆ ಬೆಲವಂತರ, ಸೋಮನಕೊಪ್ಪ, ಮುಕ್ಕಲ ಗ್ರಾಮಗಳಿಗೆ ಭೇಟಿ ನೀಡಿ ನೀರು, ಮೇವು ಸ್ಥಿತಿಗತಿ ಬಗ್ಗೆ ಪರಿಶೀಲಿಸಿದರು. ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿರುವ ಗ್ರಾಮಗಳಿಗೆ ಖಾಸಗಿ ಮಾಲೀಕರಿಂದ ಬೋರ್‍ವೆಲ್ ಬಾಡಿಗೆ ಪಡೆದು ನೀರು ಸರಬರಾಜು ಮಾಡಲಾಗುತ್ತಿದ್ದು, 9 ಗ್ರಾಮ ಪಂಚಾಯತಿಯ 13 ಗ್ರಾಮಗಳಿಗೆ ಒಟ್ಟು 27 ಖಾಸಗಿ ಕೊಳವೆ ಬಾವಿಗಳ ಮೂಲಕ ಅಗತ್ಯ ನೀರು ಪೂರೈಸಲಾಗುತ್ತಿದೆ ಎಂದರು.

ಬೆಣಚಿ ಕೆರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಕಲಘಟಗಿ ಪಟ್ಟಣಕ್ಕೆ ಇಲ್ಲಿಂದಲೇ ನೀರು ಸರಬರಾಜು ಮಾಡಲಾಗುತ್ತಿದ್ದು, ಸಾರ್ವಜನಿಕರಿಗೆ ಯಾವುದೇ ಸಮಸ್ಯೆಯಾಗದಂತೆ ನಿಗಾ ವಹಿಸುವಂತೆ ಕಲಘಟಗಿ ಪಟ್ಟಣ ಪಂಚಾಯತಿಯ ಇಂಜಿನಿಯರ್ ಅಕ್ಕಮಹಾದೇವಿ ತಡಸ ಇವರಿಗೆ ತಿಳಿಸಿದರು. 24x7 ಯೋಜನೆಯಡಿ ಇನ್ನೂ ಎರಡು ಎತ್ತರದ ಟ್ಯಾಂಕ್‍ಗಳನ್ನು ನಿರ್ಮಿಸಲು ಟೆಂಡರ್ ಮಾಡಲಾಗಿದ್ದು, ಕಾಮಗಾರಿ ಪೂರ್ಣಗೊಂಡಲ್ಲಿ ಕಲಘಟಗಿ ಪಟ್ಟಣದ 17 ವಾರ್ಡಗಳಿಗೆ ಪ್ರತಿದಿನ ನೀರು ಸರಬರಾಜು ಮಾಡಲಾಗುವುದೆಂದು ತಡಸ ತಿಳಿಸಿದರು. ತಹಶೀಲ್ದಾರ ಯಲ್ಲಪ್ಪ ಗೋಣೆಣ್ಣವರ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.

Advertisement

ನೀರಸಾಗರ ಜಲಾಶಯಕ್ಕೆ ಜಿಲ್ಲಾಧಿಕಾರಿಗಳ ಭೇಟಿ
ಹುಬ್ಬಳ್ಳಿ ಹಾಗೂ ಕುಂದಗೋಳಕ್ಕೆ ಕುಡಿಯುವ ನೀರಿನ ಮೂಲವಾಗಿರುವ ನೀರಸಾಗರ ಜಲಾಶಯಕ್ಕೆ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರು ಇಂದು ಭೇಟಿ ನೀಡಿ ನೀರಿನ ಮಟ್ಟದ ಬಗ್ಗೆ ಜಲಮಂಡಳಿ ಹಾಗೂ ಕೆ ಯು ಐ ಡಿ ಎಫ್ ಸಿ ಸೂಪರಿಂಟೆಂಡೆಂಟ್ ಇಂಜಿನಿಯರ್ ತಿಮ್ಮಪ್ಪ ಅವರಿಂದ ಮಾಹಿತಿ ಪಡೆದುಕೊಂಡರು. ಜಲಾಶಯದ ಒಟ್ಟು ಸಾಮಥ್ರ್ಯ 1.25 ಟಿಎಂಸಿ ಇದ್ದು, ಒಮ್ಮೆ ಸಂಪೂರ್ಣ ಬರ್ತಿಗೊಂಡರೆ2 ವರ್ಷದವರೆಗೆ ನೀರು ಸರಬರಾಜು ಮಾಡಬಹುದು. ಸದ್ಯ ಜಲಾಶಯದಲ್ಲಿ 0.28 ಟಿಎಂಸಿ ನೀರು ಸಂಗ್ರಹವಿದ್ದು, ಜೂನ್- ಜುಲೈವರೆಗೆ ಯಾವುದೇ ಸಮಸ್ಯೆ ಇಲ್ಲವೆಂದು ಜಲಮಂಡಳಿ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು. ಜಲಾಶಯದ ಸುತ್ತಲಿನ ಕೃಷಿಕರು ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸದಂತೆ ನಿಗಾವಹಿಸ ತಕ್ಕದ್ದು ಹಾಗೂ ಗ್ರಾಮಗಳಲ್ಲಿ ಡಂಗುರ ಸಾರುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಸ್ಥಳೀಯ ಸಮಸ್ಯೆಗಳನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಮ್ಮ ಹಂತದಲ್ಲೇ ಪರಿಹರಿಸಲು ಪ್ರಯತ್ನಿಸಬೇಕೆಂದು ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರು ತಿಳಿಸಿದರು. ಕಲಘಟಗಿಯ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿದ ಅವರು ಇ- ಆಫೀಸ್, ಚುನಾವಣೆ ವಿಭಾಗ ಹಾಗೂ ಇತರೆ ವಿಭಾಗಗಳನ್ನು ಪರಿಶೀಲಿಸಿದ ಅವರು ಸಾರ್ವಜನಿಕರ ಅಹವಾಲುಗಳನ್ನು ವಿಳಂಬ ಮಾಡದೆ 15-20 ದಿನಗಳಲ್ಲಿ ಇತ್ಯರ್ಥಗೊಳಿಸತಕ್ಕದ್ದು. ಚಿಕ್ಕ ಚಿಕ್ಕ ಸಮಸ್ಯೆಗಳಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಸಾರ್ವಜನಿಕರು ಅಲೆಯದಂತೆ ಕಾರ್ಯನಿರ್ವಹಿಸಬೇಕೆಂದು ಅವರು ತಿಳಿಸಿದರು. ಜಿಲ್ಲೆಯ ಗ್ರಾಮ ಲೆಕ್ಕಾಧಿಕಾರಿಗಳಿಗೆ ಟ್ಯಾಬ್ ನೀಡುವ ಬಗ್ಗೆ ಯೋಚಿಸಲಾಗಿದೆ. ನೌಕರರು ಆಸಕ್ತಿಯಿಂದ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲು ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು. ತಹಶೀಲ್ದಾರ ಕಚೇರಿಯಲ್ಲಿ ಮಹಿಳಾ ವಿಶ್ರಾಂತಿ ಕೊಠಡಿಯನ್ನು ನಿರ್ಮಿಸುವಂತೆ ತಹಶೀಲ್ದಾರ ಯಲ್ಲಪ್ಪ ಗೋಣೆಣ್ಣವರ ಇವರಿಗೆ ತಿಳಿಸಿದರು. ತಹಶೀಲ್ದಾರ ಕಚೇರಿಗೆ ಆಗಮಿಸಿದ್ದ ಜಿಲ್ಲಾಧಿಕಾರಿಗಳನ್ನು ಸಿಬ್ಬಂದಿ ವರ್ಗದವರು ಸನ್ಮಾನಿಸಿದರು.

Advertisement
Tags :
District CollectordroughtLatestNewsNewsKarnatakaTAHSILDARWATER
Advertisement
Next Article