For the best experience, open
https://m.newskannada.com
on your mobile browser.
Advertisement

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು. ಪ್ರವಾಸೋದ್ಯಮ ಕ್ಷೇತ್ರವನ್ನು ಹೆಚ್ಚಿಸಲು ಎರಡೂ ದೇಶಗಳು ಪ್ರಯಾಣದ ಪರಿಸ್ಥಿತಿಗಳನ್ನು ಸರಾಗಗೊಳಿಸಲು ಯೋಜನೆ ರೂಪಿಸುತ್ತಿವೆ.
09:54 PM May 18, 2024 IST | Nisarga K
ಭಾರತೀಯರಿಗೆ ಗುಡ್‌ ನ್ಯೂಸ್‌   ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ
ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು. ಪ್ರವಾಸೋದ್ಯಮ ಕ್ಷೇತ್ರವನ್ನು ಹೆಚ್ಚಿಸಲು ಎರಡೂ ದೇಶಗಳು ಪ್ರಯಾಣದ ಪರಿಸ್ಥಿತಿಗಳನ್ನು ಸರಾಗಗೊಳಿಸಲು ಯೋಜನೆ ರೂಪಿಸುತ್ತಿವೆ.

Advertisement

ರಷ್ಯಾ ಮತ್ತು ಭಾರತ ದ್ವಿಪಕ್ಷೀಯ ಒಪ್ಪಂದದ ಅಡಿಯಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಮಾನದಂಡಗಳನ್ನು ಅಂತಿಮಗೊಳಿಸಲು ಸಮಾಲೋಚನೆಗಳನ್ನು ಜೂನ್‌ ನಿಂದ ಪ್ರಾರಂಭಿಸಲಿದೆ. ವೀಸಾ ಮುಕ್ತ ಗುಂಪು ಪ್ರವಾಸಿ ವಿನಿಮಯವನ್ನು ಪ್ರಾರಂಭಿಸಿದ ಅನಂತರ ಭಾರತೀಯರು ರಷ್ಯಾಕ್ಕೆ ಸುಲಭವಾಗಿ ಪ್ರಯಾಣಿಸಬಹುದು.

ಜೂನ್‌ನಲ್ಲಿ ಪ್ರಯಾಣವನ್ನು ಸರಾಗಗೊಳಿಸುವ ದ್ವಿಪಕ್ಷೀಯ ಒಪ್ಪಂದದ ಕುರಿತು ಉಭಯ ರಾಷ್ಟ್ರಗಳು ಸಮಾಲೋಚನೆಗಳನ್ನು ಪ್ರಾರಂಭಿಸುತ್ತವೆ. ಅಂತಿಮಗೊಳಿಸುವಿಕೆಯ ಅನಂತರ ರಷ್ಯಾ ಮತ್ತು ಭಾರತವು ಒಟ್ಟಾಗಿ ವೀಸಾ- ಮುಕ್ತ ಗುಂಪು ಪ್ರವಾಸಿ ವಿನಿಮಯವನ್ನು ಪ್ರಾರಂಭಿಸುತ್ತದೆ ಎಂದು ರಷ್ಯಾದ ಸಚಿವರನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

Advertisement

ಕಜಾನ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಥಿಕ ವೇದಿಕೆ “ರಷ್ಯಾ- ಇಸ್ಲಾಮಿಕ್ ವರ್ಲ್ಡ್: ಕಜಾನ್‌ಫೋರಮ್ 2024” ಭಾಗದಲ್ಲಿ ಸಚಿವರು ಈ ವರ್ಷದ ಅಂತ್ಯದ ವೇಳೆಗೆ ಒಪ್ಪಂದ ಅಂತಿಮಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.

Advertisement
Tags :
Advertisement