For the best experience, open
https://m.newskannada.com
on your mobile browser.
Advertisement

ವಾಯುಭಾರ ಕುಸಿತ: ದ.ಕನ್ನಡಕ್ಕೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
12:41 PM May 20, 2024 IST | Nisarga K
ವಾಯುಭಾರ ಕುಸಿತ  ದ ಕನ್ನಡಕ್ಕೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ
ವಾಯುಭಾರ ಕುಸಿತ: ದ.ಕನ್ನಡಕ್ಕೆ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆ

ಮಂಗಳೂರು: ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಮುದ್ರ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಮುದ್ರಕ್ಕಿಳಿಯದಂತೆ ಮಂಗಳೂರಿನ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

Advertisement

ಇನ್ನು ಮಂಗಳೂರಿನಲ್ಲಿ ಧಾರಾಕಾರ ಮಳೆಯ ಮುನ್ಸೂಚನೆ ಇದ್ದು, ಈಗಾಗಲೇ ಮಳೆಯ ಅವಾಂತರದಿಂದ ಹಲವೆಡೆ ಹಾನಿಯುಂಟಾಗಿದೆ. ದಕ್ಷಿಣ ಕನ್ನಡದಲ್ಲಿ ನಾಳೆಯಿಂದ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, 115 .5 ಮಿಮಿ ರಿಂದ 204 .5 ಮಿಮಿ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಎಚ್ಚರಿಕೆ ವಹಿಸಲಾಗಿದೆ.

ಅಲ್ಲದೇ ಕರಾವಳಿಯುದ್ದಕ್ಕೂ ಗಂಟೆಗೆ 45 ಕಿಮಿ ನಿಂದ 55 ಕಿಮಿ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಹಿನ್ನಲೆಯಲ್ಲಿ, ಮೀನುಗಾರಿಕೆಗೆ ತೆರಳದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಹೈ ಅಲರ್ಟ್ ನೀಡಿದೆ. ಜೊತೆಗೆ ಸಮುದ್ರಕ್ಕೆ ತೆರಳಿದ ಮೀನುಗಾರಿಕಾ ಬೋಟ್ ಗಳಿಗೆ ತಕ್ಷಣ ದಡಕ್ಕೆ ಬರುವಂತೆ ಸೂಚಿಸಿದೆ.

Advertisement

Advertisement
Tags :
Advertisement