ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಒಟಿಟಿ ಬಗ್ಗೆ ಅಸಮಾಧಾನ ಹೊರಹಾಕಿದ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ಅವರು ಕನ್ನಡ ಚಿತ್ರರಂಗದ ಪರವಾಗಿ ಅನೇಕ ಬಾರಿ ಮಾತನಾಡಿದ್ದಿದೆ. ಈಗ ಅವರು ಒಟಿಟಿ ಪ್ಲಾಟ್​ಫಾರ್ಮ್​ಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಒಟಿಟಿ ಅವರು ಹೆಚ್ಚು ತೆರೆದುಕೊಂಡಿಲ್ಲ ಎಂದಿದ್ದಾರೆ.
12:25 PM Nov 29, 2023 IST | Ashitha S

ಬೆಂಗಳೂರು: ರಿಷಬ್ ಶೆಟ್ಟಿ ಅವರು ಕನ್ನಡ ಚಿತ್ರರಂಗದ ಪರವಾಗಿ ಅನೇಕ ಬಾರಿ ಮಾತನಾಡಿದ್ದಿದೆ. ಈಗ ಅವರು ಒಟಿಟಿ ಪ್ಲಾಟ್​ಫಾರ್ಮ್​ಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಒಟಿಟಿ ಅವರು ಹೆಚ್ಚು ತೆರೆದುಕೊಂಡಿಲ್ಲ ಎಂದಿದ್ದಾರೆ.

Advertisement

ಇತ್ತೀಚೆಗೆ ಅವರು ಗೋವಾದಲ್ಲಿ ನಡೆದ 54ನೇ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದರು. ಅವರಿಗೆ ಸ್ಪೆಷಲ್ ಜ್ಯೂರಿ ಅವಾರ್ಡ್ ಸಿಕ್ಕಿದೆ. ಈ ಕಾರ್ಯಕ್ರಮದಲ್ಲಿ ಅವರು ಕನ್ನಡ ಚಿತ್ರರಂಗದ ಬಗ್ಗೆ ಮಾತನಾಡಿದ್ದಾರೆ. ಒಟಿಟಿ ಪ್ಲಾಟ್​ಫಾರ್ಮ್​ಗಳು ಕನ್ನಡ ಸಿನಿಮಾಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕೋರಿದ್ದಾರೆ.

ಇದು ಒಳ್ಳೆಯ ಬೆಳವಣಿಗೆ ಅಲ್ಲ. ಇಲ್ಲಿ ಸಬ್​ಸ್ಕ್ರೈಬ್​ಗಳು ಸಿಗುವುದಿಲ್ಲ ಎಂದು ಅವರು ಹೇಳುತ್ತಾರೆ. ಕೊರೊನಾ ಸಂದರ್ಭದಲ್ಲಿ ರಕ್ಷಿತ್ ಶೆಟ್ಟಿ ಒಡೆತನದ ‘ಪರಂವಃ ಸ್ಟುಡಿಯೋಸ್’ ಹಾಗೂ ನನ್ನ ‘ರಿಷಬ್ ಶೆಟ್ಟಿ ಫಿಲ್ಮ್ಸ್​’ ಸಾಕಷ್ಟು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದವು. ಇದರ ಹೊರತಾಗಿ ಹಲವು ನಿರ್ಮಾಣ ಸಂಸ್ಥೆಗಳು ಸಿನಿಮಾ ಮಾಡುತ್ತಿವೆ. ನಾವು ಚಿತ್ರೋತ್ಸವಗಳನ್ನು ಮಾಡುತ್ತಿದ್ದೇವೆ. ಆದಾಗ್ಯೂ ಅವರು ನಮ್ಮ ಸಿನಿಮಾಗಳು ತೆಗೆದುಕೊಳ್ಳುತ್ತಿಲ್ಲ’ ಎಂದು ಅಸಮಾಧಾನ ಹೊರಹಾಕಿದ್ದಾರೆ ರಿಷಬ್ ಶೆಟ್ಟಿ.

Advertisement

Advertisement
Tags :
GOVERNMENTindiaKARNATAKALatestNewsNewsKannadaottSANDALWOODರಿಷಬ್ ಶೆಟ್ಟಿ
Advertisement
Next Article