ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನಮ್ಮ ಅಭ್ಯರ್ಥಿಗಳನ್ನು ಬೇರೆ ಪಕ್ಷದವರು ಸಂಪರ್ಕಿಸುತ್ತಿದ್ದಾರೆ ಎಂದ ಡಿಸಿಎಂ ಶಿವಕುಮಾರ್

ಕಾಂಗ್ರೆಸ್‌ ಪಕ್ಷದ ಟ್ರಬಲ್‌ ಶೂಟರ್‌ ಎಂದೇ ಪರಿಗಣಿಸಲ್ಪಟ್ಟಿರುವ ಡಿಸಿಎಂ ಡಿಕೆ ಶಿವಕುಮಾರ್‌ ತೆಲಂಗಾಣಕ್ಕೆ ತೆರಳಿದ್ದಾರೆ.
03:17 PM Dec 02, 2023 IST | Ramya Bolantoor

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಟ್ರಬಲ್‌ ಶೂಟರ್‌ ಎಂದೇ ಪರಿಗಣಿಸಲ್ಪಟ್ಟಿರುವ ಡಿಸಿಎಂ ಡಿಕೆ ಶಿವಕುಮಾರ್‌ ತೆಲಂಗಾಣಕ್ಕೆ ತೆರಳಿದ್ದಾರೆ. ತೆಲಂಗಾಣ ವಿಧಾನಸಭಾ ಎಕ್ಸಿಟ್‌ ಪೋಲ್‌ನಲ್ಲಿ ಕಾಂಗ್ರೆಸ್‌ ಬಹುಮತ ಪಡೆಯಲಿದೆ ಎಂದು ತಿಳಿಸಿದ್ದು, ಶಾಸಕರನ್ನು ಹಿಡಿದಿಟ್ಟುಕೊಳ್ಳುಲು ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಮೇರೆಗೆ ಕರ್ನಾಟಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ತೆಲಂಗಾಣದತ್ತ ಮುಖ ಮಾಡಿದ್ದಾರೆ.

Advertisement

ತೆಲಂಗಾಣಕ್ಕೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್‌ ಮಾತನಾಡಿ,ಚುನಾವಣೆ ಕಾರಣ ತೆಲಂಗಾಣಕ್ಕೆ ಹೋಗುತ್ತಿದ್ದು, ಪಕ್ಷ ಏನು ಕೆಲಸ ನೀಡುತ್ತದೆಯೋ ಅದನ್ನು ಮಾಡುತ್ತೇನೆ ಎಂದರು. ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ವಿಶ್ವಾಸ ನನಗಿದೆ. ಶಾಸಕರು ಎಲ್ಲೂ ಹೋಗುವುದಿಲ್ಲ. ಅವರನ್ನು ರಕ್ಷಣೆ ಮಾಡುವ ಅಗತ್ಯವಿಲ್ಲ. ಆ ಬಗ್ಗೆ ನನಗೆ ಇದುವರೆಗೂ ಯಾವುದೇ ಜವಾಬ್ದಾರಿ ನೀಡಿಲ್ಲ. ತೆಲಂಗಾಣ ಸೇರಿದಂತೆ ಕೆಲವು ಕಡೆ ನಮ್ಮ ಅಭ್ಯರ್ಥಿಗಳನ್ನು ಸಂಪರ್ಕಿಸುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ನಮ್ಮ ಪಕ್ಷದವರು ಸ್ಥಳೀಯ ಮಟ್ಟದಲ್ಲೇ ಇದನ್ನು ನಿಭಾಯಿಸುತ್ತಾರೆ ಎಂದು ಹೇಳಿದರು.

Advertisement
Advertisement
Tags :
CongressKARNATAKALatestNewsNewsKannadaPOLITICSಬೆಂಗಳೂರು
Advertisement
Next Article