ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಲಕ್ಷ ದೀಪೋತ್ಸವ ಪ್ರಯುಕ್ತ ಜನಾರ್ದನ ದೇವಾಲಯದಲ್ಲಿ ಪಾದಯಾತ್ರೆಗೆ ಚಾಲನೆ

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ ಪ್ರಯುಕ್ತವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿದೇವಸ್ಥಾನದಿಂದ ಧರ್ಮಸ್ಥಳದ ಕಡೆಗೆ ಹನ್ನೊಂದನೇ ವರ್ಷದ ಪಾದಯಾತ್ರೆ ಡಿ. 8 ರಂದು ನಡೆಯಿತು.
07:13 PM Dec 08, 2023 IST | Gayathri SG

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ ಪ್ರಯುಕ್ತವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿದೇವಸ್ಥಾನದಿಂದ ಧರ್ಮಸ್ಥಳದ ಕಡೆಗೆ ಹನ್ನೊಂದನೇ ವರ್ಷದ ಪಾದಯಾತ್ರೆ ಡಿ. 8 ರಂದು ನಡೆಯಿತು.

Advertisement

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಉಜಿರೆ ಶ್ರೀ ಜನಾರ್ದನ ಸ್ವಾಮಿದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ , ಬೆಂಗಳೂರು ಎಸ್ ಡಿ ಎಂ ಕ್ಷೇಮವನದ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಶ್ರದ್ಧಾಅಮಿತ್, ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಐಟಿ ಮತ್ತು ವಿದ್ಯಾರ್ಥಿ ನಿಲಯಗಳ ಆಡಳಿತ ವಿಭಾಗದ ಸಿ ಇ ಒ ಪೂರನ್ ವರ್ಮಾ ಮುಂತಾದವರು ದೀಪ ಬೆಳಗಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರಎಸ್, ಎಸ್.ಡಿ.ಎಂಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎಕುಮಾರ ಹೆಗ್ಡೆ, ಸ್ನಾತಕೋತ್ತರ ಕೇಂದ್ರದ ಡೀನ್‌ಡಾ. ವಿಶ್ವನಾಥ ಪಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಹೆಚ್ ಮಂಜುನಾಥ್, ಉಜಿರೆ ಲಕ್ಷ್ಮೀಗ್ರೂಪ್ಸ್ ಮಾಲಕ ಮೋಹನ್ ಕುಮಾರ್, ಲಯನ್ಸ್ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ನ್ಯಾಯವಾದಿ ಧನಂಜಯ್‌ರಾವ್, ಅಖಿಲ ಕರ್ನಾಟಕ ಜಾಗೃತಿ ವೇದಿಕೆ ಅಧ್ಯಕ್ಷ ಕಾಸಿಂ ಮಲ್ಲಿಗೆ ಮನೆ, ಡಾ. ಎಂ.ಎಂ ದಯಾಕರ್, ಅರವಿಂದ್ ಭಟ್ ಕೊಯ್ಯೂರು, ಶಾರದಾ ಆರ್.ರೈ ಸಹಿತ ತಾಲೂಕಿನ ಗಣ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 15 ವಲಯಗಳ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ಒಕ್ಕೂಟಗಳ ಪದಾಧಿಕಾರಿಗಳು, ಜ್ಞಾನ ವಿಕಾಸ ಕೇಂದ್ರದ ಸದಸ್ಯರು, ನಾಗರಿಕರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು.

Advertisement

ಇದರೊಂದಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಭಜನಾ ಮಂಡಳಿಗಳು ಮೆರವಣಿಗೆ ಜೊತೆ ಸಾಗಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಗತಿ ಬಂಧು ತಂಡಗಳು, ಕ್ಷೇತ್ರದ ಸಿಬ್ಬಂದಿಗಳು, ತಾಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಿದ ನಾಗರಿಕರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.

ಹನ್ನೊಂದನೇ ವರ್ಷದ ಪಾದಯಾತ್ರೆಯಲ್ಲಿ ಸುಮಾರು 81 ಗ್ರಾಮಗಳಿಂದ ಮಕ್ಕಳು, ಮಹಿಳೆಯರು, ಹಿರಿಯ ನಾಗರಿಕರು ಸೇರಿದಂತೆ ಸಾವಿರಾರು ಭಕ್ತಾಧಿಗಳು ಪಾಲ್ಗೊಂಡಿದ್ದರು. ಉಜಿರೆಯಿಂದ ಮಂಜುನಾಥ ಸ್ವಾಮಿಯ ನಾಮಸ್ಮರಣೆಯೊಂದಿಗೆ ಧರ್ಮಸ್ಥಳದತ್ತ ಪಾದಯಾತ್ರೆ ಸಾಗಿತು.

Advertisement
Tags :
DEEPOSTAVDharmasthalaJanardhanTempleLatestNewsNewsKannadaUJIREಪಾದಯಾತ್ರೆ
Advertisement
Next Article