ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪಾದಯಾತ್ರೆ

ಕೊಬ್ಬರಿಗೆ ಬೆಂಬಲ ಬೆಲೆ ಒದಗಿಸದಿರುವ ವಿಚಾರ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದಿಈಗ ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ಜೆಡಿಎಸ್ ಮುಂದಾಗಿದೆ.
03:51 PM Dec 16, 2023 IST | Ashika S

ಬೆಂಗಳೂರು: ಕೊಬ್ಬರಿಗೆ ಬೆಂಬಲ ಬೆಲೆ ಒದಗಿಸದಿರುವ ವಿಚಾರ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದಿಈಗ ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ಜೆಡಿಎಸ್ ಮುಂದಾಗಿದೆ.

Advertisement

ಪಾದಯಾತ್ರೆ ಮೂಲಕ ಬೆಂಬಲ ಬೆಲೆಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಪಕ್ಷ ಮುಂದಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​​ಡಿ ಕುಮಾರಸ್ವಾಮಿ ಅವರು 120 ಕಿಮೀ ಪಾದಯಾತ್ರೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಜನವರಿ ಮೊದಲ ವಾರದಲ್ಲಿ ನಾಲ್ಕು ತಾಲೂಕಿನಲ್ಲಿ ಕುಮಾರಸ್ವಾಮಿ ಪಾದಯಾತ್ರೆ ಮಾಡಲಿದ್ದಾರೆ. ಹಾಸನದಿಂದ ಆರಂಭವಾಗಲಿರುವ ಪಾದಯಾತ್ರೆ ತುಮಕೂರಿನಲ್ಲಿ ಅಂತ್ಯವಾಗಲಿದೆ. ಸುಮಾರು 120 ಕಿಮೀ ಪಾದಯಾತ್ರೆ ನಡೆಯಲಿದೆ. ಒಟ್ಟು ಹತ್ತು ದಿನಗಳ ಕಾಲ ಪಾದಯಾತ್ರೆ ನಡೆಯಲಿದ್ದು, ಕುಮಾರಸ್ವಾಮಿ ಅವರು ಕೊಬ್ಬರಿ ಬೆಳೆಗಾರರು ಮತ್ತು ರೈತರ ಸಮಸ್ಯೆ ಆಲಿಸಲಿದ್ದಾರೆ.

Advertisement

ಅರಸೀಕೆರೆ, ತಿಪಟೂರು, ತುರುವೇಕೆರೆ, ತುಮಕೂರು ತಾಲೂಕಿನಲ್ಲಿ ಪಾದಯಾತ್ರೆ ನಡೆಯಲಿದೆ. ಪಾದಯಾತ್ರೆ ಮೂಲಕ ಸರ್ಕಾರಕ್ಕೆ ಚಾಟಿ ಬೀಸಲು ಕುಮಾರಸ್ವಾಮಿ ತಂತ್ರ ಹೆಣೆದಿದ್ದಾರೆ ಎನ್ನಲಾಗಿದೆ.

Advertisement
Tags :
LatetsNewsNewsKannadaಕೊಬ್ಬರಿಚರ್ಚೆಬೃಹತ್ ಪ್ರತಿಭಟನೆಬೆಂಬಲ ಬೆಲೆಬೆಲೆ
Advertisement
Next Article