ಪಡೀಲಿನಲ್ಲಿ ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯಕ್ಕೆ ಅಮಾಯಕ ವ್ಯಕ್ತಿ ಬಲಿ !
ಮಂಗಳೂರು: ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ ಕಳಕೊಂಡಿದ್ದಾರೆ.
ಪಡೀಲ್ ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗದ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು ತಲೆಯ ಭಾಗಕ್ಕೆ ತೀವ್ರ ಗಾಯಗೊಂಡ ಯುವಕ ಮೃತಪಟ್ಟಿದ್ದಾರೆ. ನಮ್ಮ ಕುಡ್ಲ - ವಿಜಾರ್ಡ್ ಕೇಬಲ್ ನೆಟ್ವರ್ಕ್ ನಲ್ಲಿ ಟೆಕ್ನೀಶಿಯನ್ ಆಗಿದ್ದ, ತೊಕ್ಕೊಟ್ಟು ಬಳಿಯ ಕಲ್ಲಾಪು ನಿವಾಸಿ ಹರೀಶ್ (43) ಸಾವನ್ನಪ್ಪಿದವರು.
ರಸ್ತೆಯಿಂದ ದೂರಕ್ಕೆ ಎಸೆಯಲ್ಪಟ್ಟು ತಲೆಯ ಭಾಗಕ್ಕೆ ತೀವ್ರ ಗಾಯಗೊಂಡಿದ್ದ ಹರೀಶ್ ಅವರನ್ನು ಕೂಡಲೇ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಬ್ರೇನ್ ಡೆಡ್ ಆಗಿದೆಯೆಂದು ವೈದ್ಯರು ತಿಳಿಸಿದ್ದಾರೆ. ಕಾರನ್ನು ಮಹಿಳೆಯೊಬ್ಬರು ಡ್ರೈವಿಂಗ್ ಮಾಡುತ್ತಿದ್ದು ನಿಯಂತ್ರಣ ತಪ್ಪುತ್ತಲೇ ಬ್ರೇಕ್ ಬದಲು ಎಕ್ಸ್ ಲೆಟರ್ ತುಳಿದಿದ್ದರಿಂದ ಅಮಾಯಕ ವ್ಯಕ್ತಿಯ ಪ್ರಾಣ ಹೋಗುವಂತಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಪುಡಿ ಪುಡಿಯಾಗಿದ್ದು ಚರಂಡಿಗೆ ಬಿದ್ದಿದೆ.
ಮೃತ ಹರೀಶ್ ಪತ್ನಿ , ಇಬ್ಬರು ಗಂಡು ಮಕ್ಕಳು, ತಾಯಿ, ಓರ್ವ ಸಹೋದರ, ಇಬ್ಬರು ಸಹೋದರಿಯರನ್ನ ಅಗಲಿದ್ದಾರೆ.