For the best experience, open
https://m.newskannada.com
on your mobile browser.
Advertisement

ದ.ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದ ಪದ್ಮರಾಜ್ ರಾಮಯ್ಯ

ದಕ್ಷಿಣಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆಯಾಗಿದ್ದಾರೆ.
07:31 AM Mar 20, 2024 IST | Gayathri SG
ದ ಕ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದ ಪದ್ಮರಾಜ್ ರಾಮಯ್ಯ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆಯಾಗಿದ್ದಾರೆ.

Advertisement

ಪದ್ಮರಾಜ್ ವೃತ್ತಿಯಲ್ಲಿ ವಕೀಲರಾಗಿದ್ದು, ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಳು ಸೇವಾ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಇತ್ತೀಚೆಗೆ ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿಯೂ ಇವರು ಕಣಕ್ಕಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದರೆ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನೂ ಹೊಂದಿರದ, ಕನಿಷ್ಠ ಟಿಕೆಟ್‌ಗಾಗಿ ಅರ್ಜಿಯನ್ನೂ ಸಲ್ಲಿಸದ ಇವರಿಗೆ ಟಿಕೆಟ್ ನೀಡಿದರೆ ಪಕ್ಷದ ಕಾರ್ಯಕರ್ತರು ಬಂಡಾಯವೇಳ ಬಹುದು ಎನ್ನುವ ಕಾರಣಕ್ಕೆ ಇವರಿಗೆ ಟಿಕೆಟ್ ಕೈತಪ್ಪಿದೆ ಎಂದು ಹೇಳಲಾಗಿತ್ತು. ಇದೀಗ ಚುನಾವಣಾ ಹೊತ್ತಿನಲ್ಲೇ ಆರ್ ಪದ್ಮರಾಜ್ ಅವರನ್ನು ಪಕ್ಷ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

Advertisement

Advertisement
Tags :
Advertisement