For the best experience, open
https://m.newskannada.com
on your mobile browser.
Advertisement

ಬೆಂಗಳೂರು: ಮತದಾನದಂದು ವೇತನ ಸಹಿತ ರಜೆ ಘೋಷಣೆ

ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯನ್ನು ಮಾ.16ರಂದು ಘೋಷಿಸಿದ್ದು, ಅದರಂತೆ  ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗಧಿಯಾಗಿರುತ್ತದೆ. ಏ.26, ಶುಕ್ರವಾರ ದಂದು  ಮೊದಲನೆಯ ಹಂತ ಹಾಗೂ ಮೇ.7 ಮಂಗಳವಾರ ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದ್ದು, ಯಾದಗಿರಿ ಜಿಲ್ಲೆಯ 36-ಶೋರಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯು ಮೇ.7ರಂದು ನಡೆಯಲಿದೆ.
06:25 PM Mar 25, 2024 IST | Ashika S
ಬೆಂಗಳೂರು  ಮತದಾನದಂದು ವೇತನ ಸಹಿತ ರಜೆ ಘೋಷಣೆ

ಬೆಂಗಳೂರು: ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯನ್ನು ಮಾ.16ರಂದು ಘೋಷಿಸಿದ್ದು, ಅದರಂತೆ  ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಿಗಧಿಯಾಗಿರುತ್ತದೆ. ಏ.26, ಶುಕ್ರವಾರ ದಂದು  ಮೊದಲನೆಯ ಹಂತ ಹಾಗೂ ಮೇ.7 ಮಂಗಳವಾರ ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯಲಿದ್ದು, ಯಾದಗಿರಿ ಜಿಲ್ಲೆಯ 36-ಶೋರಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯು ಮೇ.7ರಂದು ನಡೆಯಲಿದೆ.

Advertisement

ಈ ದಿನಾಂಕಗಳಂದು ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ  ಮತದಾರರಾಗಿರುವ ಎಲ್ಲಾ ಅರ್ಹ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಹಾಗೂ 1951ರ ಪ್ರಜಾ ಪ್ರತಿನಿಧಿ ಕಾಯ್ದೆಯ ಕಲಂ.135(ಬಿ) ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಥೆಗಳು, ನಿಯೋಜಕರು ಅನುವು ಮಾಡಿ ಕೊಡಬೇಕಾಗಿದೆ.

ಚುನಾವಣೆಯು ನಡೆಯುವ ಕ್ಷೇತ್ರಗಳಲ್ಲಿ ಮತ ಚಲಾಯಿಸುವ ಅರ್ಹ ಕಾರ್ಮಿಕರು ಮತದಾನದಲ್ಲಿ ಭಾಗವಹಿಸಲು  ಅನುಕೂಲವಾಗುವಂತೆ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳ ಮಾಲೀಕರು ವೇತನ ಸಹಿತ ರಜೆ ನೀಡುವಂತೆ ಆದೇಶಿಸಿದೆ. ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆ, ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಕೆ ನೀಡಲಾಗಿದೆ.

Advertisement

Advertisement
Tags :
Advertisement