For the best experience, open
https://m.newskannada.com
on your mobile browser.
Advertisement

ಪಾಕ್ ಪರ ಘೋಷಣೆ ಸಾಬೀತಾದ್ರೆ ಕ್ರಮ: ಸಿಎಂ

ವಿಧಾನಸೌಧದ ಆವರಣದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿರುವ ಆರೋಪಕ್ಕೆ ಸಂಬಂಧಿಸಿ ರಾಜಕೀಯ ಆರೋಪ-ಪ್ರತ್ಯಾರೋಪ ತೀವ್ರಗೊಂಡಿರುವ ಬೆನ್ನಲ್ಲೇ ಆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
11:51 AM Feb 28, 2024 IST | Ashitha S
ಪಾಕ್ ಪರ ಘೋಷಣೆ ಸಾಬೀತಾದ್ರೆ ಕ್ರಮ  ಸಿಎಂ

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿರುವ ಆರೋಪಕ್ಕೆ ಸಂಬಂಧಿಸಿ ರಾಜಕೀಯ ಆರೋಪ-ಪ್ರತ್ಯಾರೋಪ ತೀವ್ರಗೊಂಡಿರುವ ಬೆನ್ನಲ್ಲೇ ಆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ದೇಶ ದ್ರೋಹಿಗಳನ್ನು ಮಟ್ಟಹಾಕಬೇಕಿದೆ ಎಂದು ಅವರು ಬುಧವಾರ ಹೇಳಿದ್ದಾರೆ.

ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಯೇ ಎಂಬ ಬಗ್ಗೆ ಮೊದಲು ತನಿಖೆಯಾಗಬೇಕಿದೆ. ಅದಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳನ್ನು ಈಗಾಗಲೇ ವಿಧಿವಿಜ್ಞಾನ ಪ್ರಯೋಗಾಯಕ್ಕೆ ತನಿಖೆಗೆ ಕಳುಹಿಸಿಕೊಟ್ಟಿದ್ದೇವೆ. ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಕ್ರಮ ಕೈಗೊಳ್ಳುತ್ತೇವೆ. ತಪ್ಪಿತಸ್ಥರು ಯಾರೇ ಆಗಿರಲಿ, ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

Advertisement

Advertisement
Tags :
Advertisement