For the best experience, open
https://m.newskannada.com
on your mobile browser.
Advertisement

ಭಾರತದೊಂದಿಗಿನ ವ್ಯಾಪಾರ ಸಂಬಂಧವನ್ನು ಪುನಃಸ್ಥಾಪಿಸಲು ಆಸಕ್ತಿ ತೋರಿದ ಪಾಕ್

ಭಾರತದೊಂದಿಗಿನ ವ್ಯಾಪಾರ ಸಂಬಂಧವನ್ನು ಪುನಃಸ್ಥಾಪಿಸಲು ಪಾಕಿಸ್ತಾನ ಆಸಕ್ತಿ ತೋರುತ್ತಿರುವಂತಿದೆ.
03:18 PM Mar 24, 2024 IST | Ashika S
ಭಾರತದೊಂದಿಗಿನ ವ್ಯಾಪಾರ ಸಂಬಂಧವನ್ನು ಪುನಃಸ್ಥಾಪಿಸಲು ಆಸಕ್ತಿ ತೋರಿದ ಪಾಕ್

ಇಸ್ಲಾಮಾಬಾದ್: ಭಾರತದೊಂದಿಗಿನ ವ್ಯಾಪಾರ ಸಂಬಂಧವನ್ನು ಪುನಃಸ್ಥಾಪಿಸಲು ಪಾಕಿಸ್ತಾನ ಆಸಕ್ತಿ ತೋರುತ್ತಿರುವಂತಿದೆ.

Advertisement

ಬೆಲ್ಜಿಯಂ ರಾಜಧಾನಿನಗರಿ ಬ್ರುಸೆಲ್ಸ್​ನಲ್ಲಿ ನಡೆದ ನ್ಯೂಕ್ಲಿಯಾರ್ ಎನರ್ಜಿ ಶೃಂಗಸಭೆಯಲ್ಲಿ ಪಾಲ್ಗೊಂಡ ಬಳಿಕ ಲಂಡನ್​ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪಾಕಿಸ್ತಾನ ವಿದೇಶಾಂಗ ಸಚಿವ ಇಶಾಕ್ ದರ್ ಪಾಕ್ ಸಚಿವರು ಭಾರತದೊಂದಿಗೆ ತಮ್ಮ ದೇಶ ವ್ಯಾಪಾರ ಸಂಬಂಧ ಪುನಾರಂಭಿಸುವ ನಿರ್ಧಾರವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ.

ಆರ್ಥಿಕ ಮತ್ತು ಹಣಕಾಸು ಸಂಕಷ್ಟಕ್ಕೆ ಸಿಲುಕಿರುವ ಪಾಕಿಸ್ತಾನಕ್ಕೆ ಈಗ ಭಾರತದೊಂದಿಗೆ ವ್ಯಾಪಾರ ಸಂಬಂಧ ಮರಳುವ ಅವಶ್ಯಕತೆಯೂ ಇದೆ.

Advertisement

‘ಪಾಕಿಸ್ತಾನದ ಉದ್ಯಮಿಗಳು ಭಾರತದೊಂದಿಗೆ ವ್ಯಾಪಾರ ಸಂಬಂಧ ಪುನಾರಂಭವಾಗಬೇಕೆಂದು ಬಯಸುತ್ತಿದ್ದಾರೆ. ಇದನ್ನು ಪಾಕಿಸ್ತಾನವೂ ಪರಿಗಣಿಸಲು ಸಿದ್ಧ ಇದೆ. ಭಾರತದೊಂದಿಗೆ ವ್ಯಾಪಾರ ನಡೆಸುವ ವಿಚಾರವನ್ನು ನಾವು ಗಂಭೀರವಾಗಿ ಅವಲೋಕಿಸುತ್ತೇವೆ’ ಎಂದು ಹೇಳಿದ್ದಾರೆ.

ಭಾರತ 370ನೇ ವಿಧಿ ರದ್ದು ಮಾಡಿ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಜಮ್ಮು ಕಾಶ್ಮೀರ ಮತ್ತು ಲಡಾಖ್ ಎಂದು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಸಿತ್ತು. ಭಾರತ ಕಾಶ್ಮೀರಿಗರ ಅಭಿಪ್ರಾಯಕ್ಕೆ ವಿರುದ್ಧವಾಗಿ ಒಮ್ಮುಖ ನಿರ್ಧಾರ ತೆಗೆದುಕೊಂಡಿದೆ ಎಂದು ಆರೋಪಿಸಿ ಪಾಕಿಸ್ತಾನವು ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಂಡಿತ್ತು.

Advertisement
Tags :
Advertisement