ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಟಿ20 ಪಂದ್ಯ ಸೋತ ಪಾಕ್:‌ ಕಿವೀಸ್ ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ ಬಾಬರ್

ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವೆ ಐದು ಟಿ20 ಪಂದ್ಯಗಳ ಸರಣಿ ನಡೆಯುತ್ತಿದೆ. ಮೊದಲ ಪಂದ್ಯದಲ್ಲಿ 46 ರನ್​ಗಳ ಸೋಲು ಅನುಭವಿಸಿದ್ದ ಪಾಕಿಸ್ತಾನ ತಂಡ ಇದೀಗ ಎರಡನೇ ಟಿ20 ಪಂದ್ಯದಲ್ಲೂ 21 ರನ್​ಗಳ ಸೋಲು ಅನುಭವಿಸಿದೆ. ಇದರೊಂದಿಗೆ ಸರಣಿಯಲ್ಲಿ 0-2 ಅಂತರದ ಹಿನ್ನಡೆ ಅನುಭವಿಸಿದೆ.
07:12 PM Jan 14, 2024 IST | Ashika S

ನ್ಯೂಜಿಲ್ಯಾಂಡ್ : ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ನಡುವೆ ಐದು ಟಿ20 ಪಂದ್ಯಗಳ ಸರಣಿ ನಡೆಯುತ್ತಿದೆ. ಮೊದಲ ಪಂದ್ಯದಲ್ಲಿ 46 ರನ್​ಗಳ ಸೋಲು ಅನುಭವಿಸಿದ್ದ ಪಾಕಿಸ್ತಾನ ತಂಡ ಇದೀಗ ಎರಡನೇ ಟಿ20 ಪಂದ್ಯದಲ್ಲೂ 21 ರನ್​ಗಳ ಸೋಲು ಅನುಭವಿಸಿದೆ. ಇದರೊಂದಿಗೆ ಸರಣಿಯಲ್ಲಿ 0-2 ಅಂತರದ ಹಿನ್ನಡೆ ಅನುಭವಿಸಿದೆ.

Advertisement

ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನದ ನಾಯಕ ಶಾಹೀನ್ ಶಾ ಆಫ್ರಿದಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಪಾಕ್ ಗೆಲುವಿಗೆ 195 ರನ್​ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ಕೊನೆಯ ಓವರ್​ನಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

ಇನ್ನು ಈ ಪಂದ್ಯದಲ್ಲಿ ಪಾಕ್ ಮಾಜಿ ನಾಯಕ ಬಾಬರ್ ಆಝಂ 43 ಎಸೆತಗಳಲ್ಲಿ 7 ಬೌಂಡರಿ ಹಾಗೂ 2 ಸಿಕ್ಸರ್ ಸಹಾಯದಿಂದ 66 ರನ್ ಕಲೆಹಾಕಿದರು. ಆದರೂ ತಂಡವನ್ನು ಗೆಲುವಿನತ್ತ ಮುನ್ನಡೆಸಲು ಬಾಬರ್​ಗೆ ಸಾಧ್ಯವಾಗಲಿಲ್ಲ. ಆದರೆ ಬಾಬರ್ ವೈಯಕ್ತಿಕವಾಗಿ ಅಪರೂಪದ ದಾಖಲೆ ಬರೆಯುವಲ್ಲಿ ಯಶಸ್ವಿಯಾದರು.

Advertisement

ಬಾಬರ್ ಈ ಪಂದ್ಯದಲ್ಲಿ 29 ನೇ ರನ್ ಗಳಿಸಿದ ತಕ್ಷಣ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿದೇಶಿ ನೆಲದಲ್ಲಿ 9000 ರನ್‌ಗಳನ್ನು ಪೂರ್ಣಗೊಳಿಸಿದರು. ಈ ಮೂಲಕ ಬಾಬರ್, ಕಿವೀಸ್ ನಾಯಕ ಕೇನ್ ವಿಲಿಯಮ್ಸನ್ ಅವರನ್ನು ಹಿಂದಿಕ್ಕಿದರು.

ಬಾಬರ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿದೇಶದಲ್ಲಿ 9 ಸಾವಿರ ರನ್ ಪೂರೈಸಿದ 9ನೇ ಆಟಗಾರ ಎನಿಸಿಕೊಂಡಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಸಚಿನ್ ತೆಂಡೂಲ್ಕರ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 20165 ರನ್ ಕಲೆಹಾಕಿದ್ದು, ವಿದೇಶಿ ನೆಲದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ.

Advertisement
Tags :
LatetsNewsNewsKannadaಅಂತರಟಿ20ನ್ಯೂಜಿಲೆಂಡ್‌ಪಂದ್ಯಪಾಕಿಸ್ತಾನ
Advertisement
Next Article