ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪಾಕಿಸ್ತಾನದಲ್ಲಿ ಭಾರಿ ಮಳೆ: 48 ಗಂಟೆಗಳಲ್ಲಿ 37 ಮಂದಿ ಸಾವು !

ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದಾಗಿ, ಅನೇಕ ಮನೆಗಳು ಕುಸಿದು ಕನಿಷ್ಠ 37 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 48 ಗಂಟೆಗಳಲ್ಲಿ ದೇಶಾದ್ಯಂತ ಭಾರೀ ಮಳೆಯಿಂದಾಗಿ ಕನಿಷ್ಠ 37 ಜನರು ಸಾವನ್ನಪ್ಪಿದ್ದಾರೆ ಮತ್ತು 50 ಜನರು ಗಾಯಗೊಂಡಿದ್ದಾರೆ.
10:15 AM Mar 04, 2024 IST | Ashitha S

ಪಾಕಿಸ್ತಾನ: ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದಾಗಿ, ಅನೇಕ ಮನೆಗಳು ಕುಸಿದು ಕನಿಷ್ಠ 37 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 48 ಗಂಟೆಗಳಲ್ಲಿ ದೇಶಾದ್ಯಂತ ಭಾರೀ ಮಳೆಯಿಂದಾಗಿ ಕನಿಷ್ಠ 37 ಜನರು ಸಾವನ್ನಪ್ಪಿದ್ದಾರೆ ಮತ್ತು 50 ಜನರು ಗಾಯಗೊಂಡಿದ್ದಾರೆ.

Advertisement

ಮಳೆಗೆ ಹಲವು ಮನೆಗಳು ಕುಸಿದಿದ್ದು, ಭೂಕುಸಿತದಿಂದ ರಸ್ತೆಗಳು ಬಂದ್‌ ಆಗಿವೆ. ಪಾಕಿಸ್ತಾನದಲ್ಲಿ ಭಾರೀ ಹಿಮಪಾತವಾದ ಸಮಯದಲ್ಲೇ ಇದು ಸಂಭವಿಸಿದೆ ಎಂದು ವರದಿಯಾಗಿದೆ.

ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಹೇಳಿಕೆಯ ಪ್ರಕಾರ, ಗುರುವಾರ ರಾತ್ರಿಯಿಂದ, ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ವಿವಿಧ ಪ್ರದೇಶಗಳಲ್ಲಿ ಮಳೆಯಿಂದಾಗಿ ಸುಮಾರು 23 ಜನರು ಸಾವನ್ನಪ್ಪಿದ್ದಾರೆ. ನೈಋತ್ಯ ಬಲೂಚಿಸ್ತಾನ್ ಪ್ರಾಂತ್ಯದ ಕರಾವಳಿ ನಗರವಾದ ಗ್ವಾದರ್‌ನಲ್ಲಿ ಪ್ರವಾಹದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ.

Advertisement

ಇನ್ನು ಬಜಾರ್, ಸ್ವಾತ್, ಲೋವರ್ ದಿರ್, ಮಲಕಂಡ್, ಖೈಬರ್, ಪೇಶಾವರ, ಉತ್ತರ, ದಕ್ಷಿಣ ವಜೀರಿಸ್ತಾನ್ ಮತ್ತು ಲಕ್ಕಿ ಮಾರ್ವತ್ ಸೇರಿದಂತೆ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಹತ್ತು ಜಿಲ್ಲೆಗಳಲ್ಲಿ ಕಳೆದ 48 ಗಂಟೆಗಳಲ್ಲಿ ಧಾರಾಕಾರ ಮಳೆಗೆ 37 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

 

Advertisement
Tags :
indiaKARNATAKALatestNewsNewsKannadapakistanaನವದೆಹಲಿಬೆಂಗಳೂರು
Advertisement
Next Article