ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪಾಕಿಸ್ತಾನ್ ಪರ ಘೋಷಣೆ: ಮೂವರು ಆರೋಪಿಗಳ ಬಂಧನ

ನಾಸೀರ್ ಹುಸೇನ್ ಅವರ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದಕ್ಕೆ ವಿಧಾನಸೌಧ ಪೊಲೀಸರು ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ.
06:30 PM Mar 04, 2024 IST | Ashika S

ಬೆಂಗಳೂರು:  ನಾಸೀರ್ ಹುಸೇನ್ ಅವರ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದಕ್ಕೆ ವಿಧಾನಸೌಧ ಪೊಲೀಸರು ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ.

Advertisement

ಬಂಧಿಸಿರುವ ಮೂವರು ಆರೋಪಿಗಳನ್ನು ಇಲ್ತಾಜ್, ಮುನಾವರ್ ಹಾಗೂ ಮೊಹಮದ್ ಶಫೊ ನಾಶಿ ಪುಡಿ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಲ್ಲಿ ಓರ್ವ ಹಾವೇರಿಯ ಬ್ಯಾಡಗಿ ಮೂಲದವನಾಗಿದ್ದು, ಮತ್ತೋರ್ವ ಆರ್​​ಟಿ ನಗರದ ನಿವಾಸಿ.

ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಡಿ, 26 ಮಂದಿಯ ಪಟ್ಟಿಯನ್ನ ಸಿದ್ದಪಡಿಸಲಾಗಿತ್ತು. ಇದರಲ್ಲಿ 7 ಮಂದಿ ವಿಚಾರಣೆ ಮಾಡಲಾಗಿತ್ತು, ಮೂವರ ವಾಯ್ಸ್​ ಸ್ಯಾಂಪಲ್ಸ್​ಗಳನ್ನ ಎಫ್​​ಎಸ್​ಎಲ್​ಗೆ ರವಾನೆ ಮಾಡಲಾಗಿತ್ತು. ಮೆಲುಧ್ವನಿ, ಏರುಧ್ವನಿ ಮಾದರಿಯಲ್ಲಿ ಸ್ಯಾಂಪಲ್ಸ್​ಗಳನ್ನ ಸಂಗ್ರಹಿಸಲಾಗಿದ್ದು, ಎಫ್​ಎಸ್​ಎಲ್ ಟೀಮ್​ ಪರಿಶೀಲನೆ ಮಾಡಿದೆ.

Advertisement

ವಿಧಾನಸೌಧ ಠಾಣೆಯ ಪೊಲೀಸರು ಬಂಧಿತರನ್ನು ನ್ಯಾಯಾಧೀಶರ ಮನೆಗೆ ಕರೆದೊಯ್ದಿದ್ದಾರೆ.

Advertisement
Tags :
BENGALURELatetsNewsNewsKannada
Advertisement
Next Article