For the best experience, open
https://m.newskannada.com
on your mobile browser.
Advertisement

ಧರ್ಮ ನಿಂದನೆ ಮಾಡಿದ ಪಾಕಿಸ್ತಾನದ ವಿದ್ಯಾರ್ಥಿಗೆ ಗಲ್ಲುಶಿಕ್ಷೆ

ಪ್ರವಾದಿ ಮುಹಮ್ಮದ್ ಮತ್ತು ಆತನ ಪತ್ನಿಯರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿ ಫೋಟೋಗಳು ಮತ್ತು ವೀಡಿಯೊಗಳನ್ನು ಸಿದ್ಧಪಡಿಸಿದ್ದಕ್ಕಾಗಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನ್ಯಾಯಾಲಯವು 22 ವರ್ಷದ ವಿದ್ಯಾರ್ಥಿಗೆ ಮರಣದಂಡನೆ ವಿಧಿಸಿದೆ.
03:09 PM Mar 13, 2024 IST | Ashitha S
ಧರ್ಮ ನಿಂದನೆ ಮಾಡಿದ ಪಾಕಿಸ್ತಾನದ ವಿದ್ಯಾರ್ಥಿಗೆ ಗಲ್ಲುಶಿಕ್ಷೆ

ಪಾಕಿಸ್ತಾನ: ಪ್ರವಾದಿ ಮುಹಮ್ಮದ್ ಮತ್ತು ಆತನ ಪತ್ನಿಯರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿ ಫೋಟೋಗಳು ಮತ್ತು ವೀಡಿಯೊಗಳನ್ನು ಸಿದ್ಧಪಡಿಸಿದ್ದಕ್ಕಾಗಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನ್ಯಾಯಾಲಯವು 22 ವರ್ಷದ ವಿದ್ಯಾರ್ಥಿಗೆ ಮರಣದಂಡನೆ ವಿಧಿಸಿದೆ.

Advertisement

ಪಾಕಿಸ್ತಾನದಲ್ಲಿ 22 ವರ್ಷದ ವಿದ್ಯಾರ್ಥಿಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಜೊತೆಗೆ ವಾಟ್ಸಾಪ್ ಸಂದೇಶಗಳ ಮೂಲಕ ಧರ್ಮನಿಂದೆಯ ಆರೋಪದ ಮೇಲೆ 17 ವರ್ಷದ ಯುವತಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ ಎಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನ್ಯಾಯಾಲಯದ ನ್ಯಾಯಾಧೀಶರ ಆದೇಶವನ್ನು ಉಲ್ಲೇಖಿಸಿ, ಬಿಬಿಸಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಮುಸ್ಲಿಮರ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ 22 ವರ್ಷದ ವಿದ್ಯಾರ್ಥಿಯು ಧರ್ಮನಿಂದೆಯ ವಿಷಯವನ್ನು ಹಂಚಿಕೊಂಡಿದ್ದಾನೆ. ಹಾಗಾಗಿ ಮರಣದಂಡನೆ ವಿಧಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ. ಧರ್ಮನಿಂದನೆ ವಿಷಯವನ್ನು ಹಂಚಿಕೊಂಡಿದ್ದಕ್ಕಾಗಿ ಹದಿಹರೆಯದ ವಿದ್ಯಾರ್ಥಿನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಆದರೆ ಇಬ್ಬರೂ ಆರೋಪಗಳನ್ನು ನಿರಾಕರಿಸಿದರು ಮತ್ತು ಅವರ ವಕೀಲರು ಬಿಬಿಸಿ ವರದಿಯ ಪ್ರಕಾರ “ಸುಳ್ಳು ಪ್ರಕರಣದಲ್ಲಿ ಸಿಲುಕಿಸಿದ್ದಾರೆ” ಎಂದು ವಾದಿಸಿದರು.

Advertisement

Advertisement
Tags :
Advertisement