For the best experience, open
https://m.newskannada.com
on your mobile browser.
Advertisement

ಪಾಕಿಸ್ತಾನ್ ಸೂಪರ್ ಲೀಗ್: ಅರ್ಧಶತಕ ಬಾರಿಸುವ ಮೂಲಕ ಬಾಬರ್ ಆಝಂ ದಾಖಲೆ

ಪಾಕಿಸ್ತಾನ್ ಸೂಪರ್ ಲೀಗ್​ನ  2ನೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಬಾಬರ್ ಆಝಂ ವಿಶೇಷ ದಾಖಲೆ ಬರೆದಿದ್ದಾರೆ.
10:03 AM Feb 19, 2024 IST | Ashika S
ಪಾಕಿಸ್ತಾನ್ ಸೂಪರ್ ಲೀಗ್  ಅರ್ಧಶತಕ ಬಾರಿಸುವ ಮೂಲಕ ಬಾಬರ್ ಆಝಂ ದಾಖಲೆ

ಲಾಹೋರ್: ಪಾಕಿಸ್ತಾನ್ ಸೂಪರ್ ಲೀಗ್​ನ  2ನೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸುವ ಮೂಲಕ ಬಾಬರ್ ಆಝಂ ವಿಶೇಷ ದಾಖಲೆ ಬರೆದಿದ್ದಾರೆ.

Advertisement

ಲಾಹೋರ್​ನ ಗದ್ದಾಫಿ ಸ್ಡೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಪೇಶಾವರ್ ಝಲ್ಮಿ ಮತ್ತು ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡಗಳು ಮುಖಾಮುಖಿಯಾಗಿತ್ತು.

ಮೊದಲು ಬ್ಯಾಟ್ ಮಾಡಿದ ಕ್ವೆಟ್ಟಾ ಗ್ಲಾಡಿಯೇಟರ್ಸ್ ತಂಡವು 5 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು. ಇದಕ್ಕುತ್ತರವಾಗಿ  ಪೇಶಾವರ್ ಝಲ್ಮಿ ಪರ ಆರಂಭಿಕನಾಗಿ ಕಣಕ್ಕಿಳಿದ ಬಾಬರ್ಬ ಆಝಂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. 42 ಎಸೆತಗಳನ್ನು ಎದುರಿಸಿದ ಬಾಬರ್ 4 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 68 ರನ್​ ಬಾರಿಸಿದರು.

Advertisement

ಬಾಬರ್ ಆಝಂ ಅವರ ಈ ಅರ್ಧಶತಕದ ಹೊರತಾಗಿಯೂ ಈ ಪಂದ್ಯದಲ್ಲಿ ಪೇಶಾವರ್ ಝಲ್ಮಿ ಸೋಲುಂಡಿದೆ.

ಈ ಅರ್ಧಶತಕದೊಂದಿಗೆ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ 3 ಸಾವಿರ ರನ್​ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆ ಬಾಬರ್ ಆಝಂ ಪಾತ್ರರಾದರು. ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಇದುವರೆಗೆ 78 ಇನಿಂಗ್ಸ್​ ಆಡಿರುವ ಬಾಬರ್ ಆಝಂ 3003 ರನ್​ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 29 ಅರ್ಧಶತಕಗಳನ್ನು ಬಾರಿಸಿದ್ದಾರೆ.

Advertisement
Tags :
Advertisement