ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಿಗ್ ಬಾಸ್ ಸೀಸನ್ 7'ರ ವಿಜೇತ 'ಪಲ್ಲವಿ ಪ್ರಶಾಂತ್' ಬಂಧನ

ತೆಲುಗು ಬಿಗ್ ಬಾಸ್ ಸೀಸನ್ 7 ರ ವಿಜೇತೆ ಪಲ್ಲವಿ ಪ್ರಶಾಂತ್ ಅವರನ್ನು ಹೈದರಾಬಾದ್ ನಲ್ಲಿ ಬುಧವಾರ ಬಂಧಿಸಲಾಗಿದೆ.
06:44 AM Dec 21, 2023 IST | Ashitha S

ಹೈದರಾಬಾದ್: ತೆಲುಗು ಬಿಗ್ ಬಾಸ್ ಸೀಸನ್ 7 ರ ವಿಜೇತೆ ಪಲ್ಲವಿ ಪ್ರಶಾಂತ್ ಅವರನ್ನು ಹೈದರಾಬಾದ್ ನಲ್ಲಿ ಬುಧವಾರ ಬಂಧಿಸಲಾಗಿದೆ.

Advertisement

ಪಲ್ಲವಿ ಪ್ರಶಾಂತ್ ಅವರನ್ನು ಕಾರ್ಯಕ್ರಮದ ವಿಜೇತರೆಂದು ಘೋಷಿಸಿದ ನಂತರ, ಅವರ ಅಭಿಮಾನಿಗಳು ರಿಯಾಲಿಟಿ ಶೋನ ರನ್ನರ್ ಅಪ್ ಅಮರ್ದೀಪ್ ಚೌಧರಿ ಅವರ ಕಾರಿನ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರಮುಖ ಆರೋಪಿ ಪ್ರಶಾಂತ್ ಮತ್ತು ಅವನ ಸಹೋದರ ಮನೋಹರ್ ಸೇರಿದಂತೆ ಭಾಗಿಯಾಗಿರುವವರ ವಿರುದ್ಧ ಪೊಲೀಸರು ಅನೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳ ಮೂಲಕ ಇತರ ವ್ಯಕ್ತಿಗಳನ್ನು ಗುರುತಿಸುವ ಕೆಲಸವನ್ನು ಅಧಿಕಾರಿಗಳು ಮಾಡುತ್ತಿದ್ದಾರೆ.

Advertisement

ಡಿಸೆಂಬರ್ 17 ರಂದು ನಡೆದ ಬಿಗ್ ಬಾಸ್ ತೆಲುಗು 7 ಗ್ರ್ಯಾಂಡ್ ಫಿನಾಲೆಯಲ್ಲಿ ಪಲ್ಲವಿ ಪ್ರಶಾಂತ್ ವಿಜೇತರಾಗಿದ್ದರು. ಇನ್ನು ಸಿದ್ದಿಪೇಟೆ ಜಿಲ್ಲೆಯ ಕೊಲ್ಲೂರಿನಲ್ಲಿ ಪಲ್ಲವಿ ಪ್ರಶಾಂತ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಶಾಂತ್ ನನ್ನು ಪೊಲೀಸರು ಬಂಧಿಸಿ ಜುಬಿಲಿ ಹಿಲ್ಸ್ ಪಿಎಸ್ ಠಾಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

Advertisement
Tags :
indiaLatestNewsNewsKannadaನವದೆಹಲಿಪಲ್ಲವಿ ಪ್ರಶಾಂತ್ಬೆಂಗಳೂರು
Advertisement
Next Article