ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ತಂಡದ ಗೆಲುವಿಗಾಗಿ ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪಾಂಡ್ಯ

ಮುಂಬೈ ಇಂಡಿಯನ್ಸ್‌ ತಂಡದ ನಾಯಕನಾಗಿ ಹ್ಯಾಟ್ರಿಕ್‌ ಸೋಲು ಕಂಡಿರುವ ಹಾರ್ದಿಕ್‌ ಪಾಂಡ್ಯ, ಗುಜರಾತ್‌ನ ಸೋಮನಾಥ ದೇವಾಲಯದಲ್ಲಿ ಇಂದು  ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಪಾಂಡ್ಯ ನೇತೃತ್ವದ ಮುಂಬೈ ಪಡೆ ಈ ಬಾರಿಯ ಐಪಿಎಲ್‌ ಟಿ20 ಕ್ರಿಕೆಟ್‌ನಲ್ಲಿ ಕಳಪೆ ಪ್ರದರ್ಶನ ತೋರಿದೆ.
08:50 PM Apr 05, 2024 IST | Ashitha S

ಗುಜರಾತ್‌:  ಮುಂಬೈ ಇಂಡಿಯನ್ಸ್‌ ತಂಡದ ನಾಯಕನಾಗಿ ಹ್ಯಾಟ್ರಿಕ್‌ ಸೋಲು ಕಂಡಿರುವ ಹಾರ್ದಿಕ್‌ ಪಾಂಡ್ಯ, ಗುಜರಾತ್‌ನ ಸೋಮನಾಥ ದೇವಾಲಯದಲ್ಲಿ ಇಂದು  ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಪಾಂಡ್ಯ ನೇತೃತ್ವದ ಮುಂಬೈ ಪಡೆ ಈ ಬಾರಿಯ ಐಪಿಎಲ್‌ ಟಿ20 ಕ್ರಿಕೆಟ್‌ನಲ್ಲಿ ಕಳಪೆ ಪ್ರದರ್ಶನ ತೋರಿದೆ.

Advertisement

ಈವರೆಗೆ ಆಡಿರುವ ಮೂರೂ ಪಂದ್ಯಗಳಲ್ಲಿ ಮುಗ್ಗರಿಸಿದ್ದು, ಪಾಯಿಂಟ್‌ ಖಾತೆ ತೆರೆಯಲು ವಿಫಲವಾಗಿದೆ. ಸ್ವತಃ ಆಲ್‌ರೌಂಡರ್ ಆಗಿರುವ ಹಾರ್ದಿಕ್‌, ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಎರಡರಲ್ಲೂ ವೈಫಲ್ಯ ಅನುಭವಿಸಿದ್ದಾರೆ. ಮೂರೂ ಪಂದ್ಯಗಳಲ್ಲಿ ಬ್ಯಾಟ್‌ ಬೀಸಿರುವ ಅವರು, ಗಳಿಸಿರುವುದು 69 ರನ್ ಮಾತ್ರ. 7 ಓವರ್‌ ಬೌಲಿಂಗ್‌ ಮಾಡಿ, 10.85ರ ಸರಾಸರಿಯಲ್ಲಿ ರನ್‌ ಬಿಟ್ಟುಕೊಟ್ಟಿದ್ದರೂ, ದಕ್ಕಿರುವುದು 1 ವಿಕೆಟ್‌ ಅಷ್ಟೇ.

ಕಳೆದೆರಡು ಆವೃತ್ತಿಯಲ್ಲಿ ಗುಜರಾತ್‌ ಟೈಟನ್ಸ್‌ ತಂಡ ಮುನ್ನಡೆಸಿದ್ದ ಹಾರ್ದಿಕ್‌, ಈ ಆವೃತ್ತಿ ಆರಂಭಕ್ಕೂ ಮುನ್ನ ಮುಂಬೈ ತಂಡ ಸೇರಿದ್ದರು. ಈ ಹಿಂದೆ ಐದು ಸಲ ಕಪ್‌ ಗೆದ್ದುಕೊಟ್ಟಿದ್ದ ರೋಹಿತ್‌ ಶರ್ಮಾ ಅವರನ್ನು ಕೆಳಗಿಳಿಸಿ, ಹಾರ್ದಿಕ್‌ಗೆ ನಾಯಕತ್ವದ ಹೊಣೆ ನೀಡಲಾಗಿದೆ. ಇದು ರೋಹಿತ್‌ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Advertisement

Advertisement
Tags :
haardhikpandyaindiaLatestNewsNewsKannadaನವದೆಹಲಿ
Advertisement
Next Article