ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

18 ವರ್ಷ ಮೀರದ ಮಕ್ಕಳಿಂದ ವಾಹನ ಚಾಲನೆ: ಒಂದೇ ದಿನ 1800 ಮಕ್ಕಳ ಪೋಷಕರಿಗೆ ದಂಡ

ಬೆಂಗಳೂರಿನ ಸಂಚಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. 18 ವರ್ಷ ವಯಸ್ಸಾಗದ, ಚಾಲನಾ ಪರವಾನಗಿ ಹೊಂದಿಲ್ಲದ ಶಾಲೆ, ಕಾಲೇಜು ವಿದ್ಯಾರ್ಥಿಗಳು ಬೈಕ್ ರೈಡ್ ಮಾಡಿದ ವಿಚಾರವಾಗಿ ಒಂದೇ ದಿನದಲ್ಲಿ ನಗರದಲ್ಲಿ 1800 ಮಕ್ಕಳ ಪೋಷಕರಿಗೆ ಸಂಚಾರ ಪೊಲೀಸರು  ದಂಡ ವಿಧಿಸಿದ್ದಾರೆ. 
09:43 AM Feb 02, 2024 IST | Ashika S

ಬೆಂಗಳೂರು:  ಬೆಂಗಳೂರಿನ ಸಂಚಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. 18 ವರ್ಷ ವಯಸ್ಸಾಗದ, ಚಾಲನಾ ಪರವಾನಗಿ ಹೊಂದಿಲ್ಲದ ಶಾಲೆ, ಕಾಲೇಜು ವಿದ್ಯಾರ್ಥಿಗಳು ಬೈಕ್ ರೈಡ್ ಮಾಡಿದ ವಿಚಾರವಾಗಿ ಒಂದೇ ದಿನದಲ್ಲಿ ನಗರದಲ್ಲಿ 1800 ಮಕ್ಕಳ ಪೋಷಕರಿಗೆ ಸಂಚಾರ ಪೊಲೀಸರು  ದಂಡ ವಿಧಿಸಿದ್ದಾರೆ.

Advertisement

ಶಾಲಾ ಕಾಲೇಜುಗಳ ಬಳಿಯೇ ಹೋಗಿ ವಿದ್ಯಾರ್ಥಿಗಳು ತಂದ ವಾಹನಗಳನ್ನು ತಡೆದು ಡಿಎಲ್ ಹಾಗೂ ವಯಸ್ಸು ತಪಾಸಣೆ ಮಾಡಿದ್ದಾರೆ.

ನಗರದ ಒಟ್ಟು 150ಕ್ಕೂ ಹೆಚ್ಚು ಶಾಲೆಗಳಲ್ಲಿ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸುಮಾರು 1500ಕ್ಕೂ ಹಚ್ಚು ವಿದ್ಯಾರ್ಥಿಗಳು ನಿಯಮ ಉಲ್ಲಂಘನೆ ಮಾಡಿರೋದು ಪತ್ತೆಯಾಗಿದೆ. ಬಳಿಕ ಅವರ ಪೋಷಕರನ್ನು ಕರೆಸಿ ದಂಡ ವಿಧಿಸಿ ವಾಹನಗಳನ್ನು ಮಕ್ಕಳ ಕೈಗೆ ಕೊಡದಂತೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

Advertisement

ಪೋಷಕರನ್ನು ಕರೆಸಿ ದಂಡ ವಿಧಿಸಿದ ಪೊಲೀಸರು, ಪುನಃ ಇದೇ ರೀತಿ ಮಾಡಿದರೆ ಎಫ್​ಐಆರ್ ದಾಖಲಿಸುವುದಾಗಿ ಪೋಷಕರಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಅಲ್ಲದೆ, ಶಾಲೆಗಳಿಂದ ಸುತ್ತೋಲೆ ಕೂಡ ಹೊರಡಿಸಲು ಸೂಚನೆ ನೀಡಿದ್ದಾರೆ.

ಶಾಲಾ ಮಕ್ಕಳು ಬೈಕ್ ರೈಡ್ ಮಾಡಿಕೊಂಡು ತೆರಳುತ್ತಿರವುದು ಅಪಘಾತಗಳಿಗೂ ಕಾರಣವಾಗುತ್ತಿದೆ. ಅಪಘಾತಗಳ ಸಂಖ್ಯೆ ಹೆಚ್ಚಳಕ್ಕೂ ಕಾರಣವಾಗುತ್ತಿದೆ. ಹೀಗಾಗಿ ಸಂಚಾರ ಪೊಲೀಸರು ಈ ನಿರ್ಧಾರಕ್ಕೆ ಬಂದಿದ್ದಾರೆ.

Advertisement
Tags :
18 ವರ್ಷLatetsNewsNewsKannadaಕಾರ್ಯಾಚರಣೆಚಾಲನಾ ಪರವಾನಗಿನಗರ ಸಂಚಾರಿ ಪೊಲೀಸ್
Advertisement
Next Article