For the best experience, open
https://m.newskannada.com
on your mobile browser.
Advertisement

ಐಸಿಹಾಸಿಕ ಒಲಿಂಪಿಕ್ಸ್ ಗೆ ಸಿದ್ದವಾಗುತ್ತಿದೆ ಪ್ಯಾರಿಸ್​

ವಿಶ್ವದ ಅತಿ ದೊಡ್ಡ ಕ್ರೀಡಾಕೂಟವಾದ ಒಲಿಂಪಿಕ್ಸ್​ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಬಾರಿ ಪ್ಯಾರಿಸ್​ನಲ್ಲಿ ಕ್ರೀಡಾಕೂಡ ನಡೆಯುತ್ತಿದೆ. ಇದೇ ತಿಂಗಳ 26ರಿಂದ ಟೂರ್ನಿ ಆರಂಭಗೊಳ್ಳಲಿದೆ.
07:50 PM Jul 11, 2024 IST | Ashitha S
ಐಸಿಹಾಸಿಕ ಒಲಿಂಪಿಕ್ಸ್ ಗೆ ಸಿದ್ದವಾಗುತ್ತಿದೆ ಪ್ಯಾರಿಸ್​

ಪ್ಯಾರಿಸ್​: ವಿಶ್ವದ ಅತಿ ದೊಡ್ಡ ಕ್ರೀಡಾಕೂಟವಾದ ಒಲಿಂಪಿಕ್ಸ್​ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ಬಾರಿ ಪ್ಯಾರಿಸ್​ನಲ್ಲಿ ಕ್ರೀಡಾಕೂಡ ನಡೆಯುತ್ತಿದೆ. ಇದೇ ತಿಂಗಳ 26ರಿಂದ ಟೂರ್ನಿ ಆರಂಭಗೊಳ್ಳಲಿದೆ.

Advertisement

ಈ ಬಾರಿಯ ಒಲಿಂಪಿಕ್ಸ್​ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಜುಲೈ 26ರಂದು ಸೀನ್ ನದಿಯಲ್ಲಿ ಸಂಜೆ 7.30ಕ್ಕೆ ಅದ್ಧೂರಿ ಕಾರ್ಯಕ್ರಮದೊಂದಿಗೆ ನೆರವೇರಲಿದೆ.

ಕ್ರೀಡಾಕೂಟ ಜುಲೈ 26ರಿಂದ ಆರಂಭವಾಗಿ, ಆಗಸ್ಟ್‌ 11ರವರೆಗೆ ನಡೆಯಲಿದೆ. ಪ್ಯಾರಾಲಿಂಪಿಕ್ಸ್‌ ಆಗಸ್ಟ್‌ 28 ರಿಂದ ಸೆಪ್ಟೆಂಬರ್‌ 8ರವರೆಗೆ ನಿಗದಿಯಾಗಿದೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಯನ್ನು ಈಗಾಗಲೇ ಕ್ರೀಡಾಕೂಟದ ಆಯೋಜಕರು ಮಾಡಿದ್ದಾರೆ. ಗೇಮ್ಸ್‌ಗಾಗಿಯೇ ಇಲ್ಲಿನ ಸೀನ್‌ ನದಿಯನ್ನು ಸಾರ್ವಜನಿಕ ನಿಧಿಯಿಂದ ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿ ಈ ನದಿಯನ್ನು ಸ್ನಾನಮಾಡಲು ಯೋಗ್ಯವೆನಿಸುವ ರೀತಿಯಲ್ಲಿ ಸ್ವಚ್ಛ ಮಾಡಲಾಗಿದೆ.

Advertisement

ಒಲಿಂಪಿಕ್ಸ್​ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

Advertisement
Tags :
Advertisement