ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತಾನು ಉಗ್ರನೆಂದು ಬೆದರಿಕೆ ಹಾಕಿದ ಪ್ರಯಾಣಿಕ ಅರೆಸ್ಟ್

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೋರ್ವ, ತಾನು ಉಗ್ರಗಾಮಿ ಎಂದು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾನೆ.
10:37 AM Feb 21, 2024 IST | Ashika S

ಬೆಂಗಳೂರು:  ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೋರ್ವ, ತಾನು ಉಗ್ರಗಾಮಿ ಎಂದು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾನೆ.

Advertisement

ಆರೋಪಿ ಆದರ್ಶ್ ಕುಮಾರ್ ಸಿಂಗ್ ಎಂಬಾತ ಫೆಬ್ರವರಿ 17ರಂದು ಬೆಂಗಳೂರಿನಿಂದ ಲಖನೌಗೆ ಹೊರಟಿದ್ದ. ವಿಮಾನ ಏರಲು ತೆರಳಿದ್ದ ಆತ ಕೊನೇ ಕ್ಷಣದಲ್ಲಿ ಹಿಂತಿರುಗಿ ವಾಪಸ್ ತೆರಳಲು ಮುಂದಾಗಿದ್ದ. ಈ ಬಗ್ಗೆ ಏರ್ ಇಂಡಿಯಾ ಸಿಬ್ಬಂದಿ ಭದ್ರತಾ ಪಡೆಗೆ ಮಾಹಿತಿ ನೀಡಿದ್ದರು. ಇದೇ ವೇಳೆ, ವಿಮಾನ ಹತ್ತದೆ ಯಾಕೆ ವಾಪಸ್ ತೆರಳುತ್ತಿದ್ದೀರಿ ಎಂದು ಏರ್​ಪೋರ್ಟ್ ಭದ್ರತಾ ಪಡೆ ಸಿಬ್ಬಂದಿ ಪ್ರಶ್ನಿಸಿದ್ದಾರೆ.

ಭದ್ರತಾ ಸಿಬ್ಬಂದಿಯ ಪ್ರಶ್ನೆಗೆ ಆದರ್ಶ್ ಕುಮಾರ್ ಸಿಂಗ್, ‘ನಾನು ಭಯೋತ್ಪಾದಕರ ಗುಂಪಿಗೆ ಸೇರಿದವನು. ನಾನು ಲಖನೌಗೆ ತೆರಳಲ್ಲ’ ಎಂದು ಬೆದರಿಕೆ ಹಾಕಿದ್ದ.

Advertisement

ಸದ್ಯ ಆರೋಪಿ ಕೆಂಪೇಗೌಡ ಏರ್​​ಪೋರ್ಟ್​ ಠಾಣೆ ಪೊಲೀಸರ ವಶದಲ್ಲಿದ್ದು ವಿಚಾರಣೆ ನಡೆಯುತ್ತಿದೆ. ಕೆಂಪೇಗೌಡ ಏರ್​ಪೋರ್ಟ್​ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Advertisement
Tags :
LatetsNewsNewsKannadaಉಗ್ರಗಾಮಿಪ್ರಯಾಣಿಕವಿಮಾನ ನಿಲ್ದಾಣವಿಮಾನಯಾನ
Advertisement
Next Article