For the best experience, open
https://m.newskannada.com
on your mobile browser.
Advertisement

"ಪಟ್ಲ ಸಂಭ್ರಮ" ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ 'ಪಟ್ಲ ಸಂಭ್ರಮ' ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ ಫೌಂಡೇಶನ್ ನ ಎಲ್ಲಾ ಘಟಕದ ಪದಾಧಿಕಾರಿಗಳು, ಸದಸ್ಯರು ಸಕ್ರೀಯವಾಗಿ ಭಾಗವಹಿಸುವಂತೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.
04:53 PM May 17, 2024 IST | Ashika S
 ಪಟ್ಲ ಸಂಭ್ರಮ  ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮಂಗಳೂರು: ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ ಫೌಂಡೇಶನ್ ನ ಎಲ್ಲಾ ಘಟಕದ ಪದಾಧಿಕಾರಿಗಳು, ಸದಸ್ಯರು ಸಕ್ರೀಯವಾಗಿ ಭಾಗವಹಿಸುವಂತೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.

Advertisement

ಪಟ್ಲ ಸಂಭ್ರಮ ಕಾರ್ಯಕ್ರಮದ ಕುರಿತು ಪತ್ತುಮುಡಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. "ಪಟ್ಲ ಸಂಭ್ರಮ" ಕಲಾವಿದರಿಗೆ ಕಲಾಪೋಷಕರಿಗೆ ಹಬ್ಬದ ವಾತಾವರಣ ಸೃಷ್ಟಿಸಿದೆ. ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ಎಲ್ಲರೂ ದುಡಿಯಬೇಕು. ಹೀಗಾಗಲೇ ಎಲ್ಲಾ ಘಟಕಗಳು ಆಮಂತ್ರಣ ಪತ್ರವನ್ನು ವಿತರಿಸುವ ಕೆಲಸ ಮಾಡಿದೆ.

2024 ರ ಸಾಲಿನ ಯಕ್ಷಧ್ರುವ ಪಟ್ಲ ಪ್ರಶಸ್ತಿಯನ್ನು ಬಡಗುತಿಟ್ಟಿನ ಕಲಾವಿದ ರಾಮಚಂದ್ರ ಹೆಗಡೆ ಕೊಂಡದಕುಳಿ ಪಡೆಯಲಿದ್ದಾರೆ. ಸಮಾರಂಭದಲ್ಲಿ ಚಲನಚಿತ್ರ ನಟ ಕಿಚ್ಚ ಸುದೀಪ್ ಭಾಗವಹಿಸುವುದು ಕಾರ್ಯಕ್ರಮದ ಮೆರಗನ್ನು ಹೆಚ್ಚಿಸಲಿದೆ ಎಂದರು.

Advertisement

ಸಮಾರಂಭದಲ್ಲಿ ಹಿರಿಯ ಅರ್ಥದಾರಿ ಪ್ರಭಾಕರ ಜೋಷಿ ಭಾಗವಹಿಸಿ ಸಲಹೆ ಸೂಚನೆ ನೀಡಿದರು. ಭುಜಬಲಿ ಧರ್ಮಸ್ಥಳ, ಸರಪಾಡಿ ಅಶೋಕ್ ಶೆಟ್ಟಿ, ಚಂದ್ರಹಾಸ ಶೆಟ್ಟಿ ರಂಗೋಲಿ, ಟಿ.ಬಿ. ರಾಜಾರಾಂ ಭಟ್, ಪೂರ್ಣಿಮಾ ಯತೀಶ್ ರೈ ಮೊದಲಾದವರು ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ ಕಾರ್ಯಕ್ರಮಗಳ ಸ್ವರೂಪವನ್ನು ವಿವರಿಸಿದರು.

ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ‌ ಕೆ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸಿ ಎ ಸುದೇಶ್ ಕುಮಾರ್ ರೈ, ಉಪಾಧ್ಯಕ್ಷ ಮನು ರಾವ್, ಸಂಘಟನಾ ಕಾರ್ಯದರ್ಶಿ ಬಾಳ ಜಗನ್ನಾಥ ಶೆಟ್ಟಿ, ರಾಜೀವ ಪೂಜಾರಿ ಕೈಕಂಬ, ಉದಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಪುರುಷೋತ್ತಮ ಭಂಡಾರಿ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ ಅಶೋಕನಗರ ವಂದಿಸಿದರು.

Advertisement
Tags :
Advertisement