ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ದೇವತಾ ಸೇವೆಯ ಮೂಲಕ ಸಮಾಜ, ದೇಶದ ಸೇವೆ - ಪೇಜಾವರ ಶ್ರೀ

ಊರವರೆಲ್ಲರೂ ಸೇರಿ ನಡೆಸುವ ದೇವತಾ ಸೇವೆಯಿಂದ ಊರು ಸುಭಿಕ್ಷವಾಗುತ್ತದೆ, ಈ ಮೂಲಕ ದೇಶ ಸುಭಿಕ್ಷವಾಗುತ್ತದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹೇಳಿದರು.
05:36 PM Mar 19, 2024 IST | Nisarga K
ಊರವರೆಲ್ಲರೂ ಸೇರಿ ನಡೆಸುವ ದೇವತಾ ಸೇವೆಯಿಂದ ಊರು ಸುಭಿಕ್ಷವಾಗುತ್ತದೆ, ಈ ಮೂಲಕ ದೇಶ ಸುಭಿಕ್ಷವಾಗುತ್ತದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹೇಳಿದರು.

ಉಡುಪಿ: ಊರವರೆಲ್ಲರೂ ಸೇರಿ ನಡೆಸುವ ದೇವತಾ ಸೇವೆಯಿಂದ ಊರು ಸುಭಿಕ್ಷವಾಗುತ್ತದೆ, ಈ ಮೂಲಕ ದೇಶ ಸುಭಿಕ್ಷವಾಗುತ್ತದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹೇಳಿದರು.

Advertisement

ಶ್ರೀ ಕ್ಷೇತ್ರ ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ - ಶ್ರೀ ಮಹಾಗಣಪತಿ ದೇವರ ನೂತನ ದೇವಳದ ಸಮರ್ಪಣೆ, ಪುನಃಪ್ರತಿಷ್ಠೆ, ಸಹಸ್ರಕಲಶ ಬ್ರಹ್ಮಕುಂಭಾಭಿಷೇಕಕ್ಕೆ ಪೂರ್ವಬಾವಿಯಾಗಿ ನಡೆದ ಹೊರೆಕಾಣಿಕೆಯ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.


ಊರವರು ನಡೆಸಿದ ಈ ಭವ್ಯ ಹೊರೆಕಾಣಿಕೆ ಮೆರವಣಿಗೆಯನ್ನು ನೋಡಿದಾಗ ಅವರ ಭಕ್ತಿಶ್ರದ್ಧೆಗಳು ಕಾಣುತ್ತಿವೆ. ಅನ್ನದಾನಕ್ಕೆ ಪೂರಕವಾಗಿ ನಡೆದ ಈ ಹೊರೆಕಾಣಿಕೆಯನ್ನು ತಂದೊಪ್ಪಿಸಿದ ಪ್ರತಿಯೊಬ್ಬರ ಮನೆಯಲ್ಲಿ ಅನ್ನಕ್ಕೆ ಕೊರತೆಯಾಗುವುದಿಲ್ಲ ಎಂದ ಶ್ರೀಗಳು ಎಲ್ಲರಿಗೂ ಕ್ಷೇತ್ರಾಧಿಪತಿ ದೇವತೆಗಳು, ಉಡುಪಿ ಶ್ರೀಕೃಷ್ಣ ಮುಖ್ಯಪ್ರಾಣ ಮತ್ತು ವಿಶೇಷವಾಗಿ ಆಯೋಧ್ಯೆ ಬಾಲರಾಮನ ಅನುಗ್ರಹವನ್ನು ಪ್ರಾರ್ಥಿಸುತ್ತೇವೆ ಎಂದರು.
Advertisement

Advertisement
Tags :
godworkLatestNewsNewsKarnatakapejavrashreepubliceservisestatmentUDUPI
Advertisement
Next Article