ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪೇಜಾವರ ಶ್ರೀ ನೇತೃತ್ವದಲ್ಲಿ ರಾಮ ಮಂದಿರದಲ್ಲಿ ಪ್ರಧಾನಿ ಮೋದಿ, ಮೋಹನ್ ಭಾಗವತ್ ಪೂಜೆ

ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಅತ್ಯಂತ ಸಾಂಗವಾಗಿ ನೆರವೇರಿದೆ. ಈ ವೇಳೆ ಗರ್ಭಗುಡಿಯಲ್ಲಿ ಉಪಸ್ಥಿತರಿದ್ದ ಕೆಲವೇ ಕೆಲವು ಗಣ್ಯರ ಪೈಕಿ ಕರ್ನಾಟಕದ ಪ್ರಮುಖ ಮಠಗಳಲ್ಲಿ ಒಂದಾದ ಪೇಜಾವರ ಮಠದ ಶ್ರೀಗಳು ಸಹ ಉಪಸ್ಥಿತರಿದ್ದು, ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದ್ದಾರೆ.
03:07 PM Jan 22, 2024 IST | Ashitha S

ಅಯೋಧ್ಯೆ: ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಅತ್ಯಂತ ಸಾಂಗವಾಗಿ ನೆರವೇರಿದೆ. ಈ ವೇಳೆ ಗರ್ಭಗುಡಿಯಲ್ಲಿ ಉಪಸ್ಥಿತರಿದ್ದ ಕೆಲವೇ ಕೆಲವು ಗಣ್ಯರ ಪೈಕಿ ಕರ್ನಾಟಕದ ಪ್ರಮುಖ ಮಠಗಳಲ್ಲಿ ಒಂದಾದ ಪೇಜಾವರ ಮಠದ ಶ್ರೀಗಳು ಸಹ ಉಪಸ್ಥಿತರಿದ್ದು, ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದ್ದಾರೆ.

Advertisement

ಪೇಜಾವರ ಮಠಕ್ಕೆ ಮೊದಲಿಂದಲೂ ಅಯೋಧ್ಯೆ ರಾಮ ಮಂದಿರದ ಜೊತೆಗೆ ನಂಟಿದ್ದು, ಹೊಸ ರಾಮ ಮಂದಿರ ನಿರ್ಮಾಣದಲ್ಲಿ ಪೇಜಾವರ ಮಠದ ಶ್ರೀಗಳ ಪಾತ್ರ ಮಹತ್ವದ್ದಾಗಿದೆ.

ಪೇಜಾವರ ಮಠದ ಹಿಂದಿನ ಶ್ರಿಗಳಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ನೇತೃತ್ವದಲ್ಲಿ 1985ರಲ್ಲಿ ಜರುಗಿದ ನಡೆದ ಧರ್ಮ ಸಂಸತ್‌ನಲ್ಲಿ ಮಂದಿರ ಕಟ್ಟುವೆವು ಎಂಬ ನಿರ್ಣಯವನ್ನು ಅಂಗೀಕರಿಸಲಾಗಿತ್ತು.

Advertisement

ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿಯಾಗಿದ್ದಾರೆ. ಅವರು ಕಳೆದ ಕೆಲ ದಿನಗಳ ಹಿಂದೆಯೇ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದರು. ಒಟ್ಟು 45 ದಿನಗಳು ಪೇಜಾವರ ಶ್ರೀಗಳು ಅಯೋಧ್ಯೆಯಲ್ಲೇ ಇರಲಿದ್ದಾರೆ.

 

Advertisement
Tags :
GOVERNMENTindiaLatestNewsNewsKannadaನವದೆಹಲಿಪೇಜಾವರ ಶ್ರೀಭಾಗವತ್ ಪೂಜೆ
Advertisement
Next Article