For the best experience, open
https://m.newskannada.com
on your mobile browser.
Advertisement

ಪೆನ್‌ ಡ್ರೈವ್‌ ಪ್ರಕರಣ: 'ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು ಅವರೇ ನುಂಗಿಕೊಳ್ಳಲಿ'

ಪೆನ್‌ ಡ್ರೈವ್‌ ಪ್ರಕರಣದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು ಅವರೇ ನುಂಗಿಕೊಳ್ಳಲಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.
05:21 PM May 14, 2024 IST | Chaitra Kulal
ಪೆನ್‌ ಡ್ರೈವ್‌ ಪ್ರಕರಣ   ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು ಅವರೇ ನುಂಗಿಕೊಳ್ಳಲಿ

ಬೆಂಗಳೂರು: ಪೆನ್‌ ಡ್ರೈವ್‌ ಪ್ರಕರಣದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು ಅವರೇ ನುಂಗಿಕೊಳ್ಳಲಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

Advertisement

‘ಪೆನ್‌ ಡ್ರೈವ್‌ ಪ್ರಕರಣದ ಹಿಂದೆ ದೊಡ್ಡ ತಿಮಿಂಗಗಿಲವಿದೆ’ ಎಂಬ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಅವರಿಗೆ ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ ಅವರನ್ನು ಒಳಗೆ ಹಾಕಿಸಲಿ. ತಿಮಿಂಗಿಲಗಳನ್ನು ಅವರೇ ನುಂಗಿಕೊಳ್ಳಲಿ. ನಾನು ನಿರ್ದೇಶಕನೂ ಅಲ್ಲ, ನಿರ್ಮಾಪಕನೂ ಅಲ್ಲ. ನಾನು ಕೇವಲ ಪ್ರದರ್ಶಕ ಅಷ್ಟೇ’ ಎಂದರು.

ಶಾಸಕರು, ಸಚಿವರಿಂದ ಮಾತನಾಡಿಸುತ್ತಿರುವವರು ಯಾರು ಎಂಬ ಕುಮಾರಸ್ವಾಮಿ ಪ್ರಶ್ನೆಗೆ, ‘ಬೇರೆಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ’ ಎಂದು ಹೇಳಿದರು.

Advertisement

‘ರಾಜಕೀಯ ಪಕ್ಷದ ಅಧ್ಯಕ್ಷನಾದ ನಾನು ಚುನಾವಣಾ ಪ್ರಚಾರದಲ್ಲಿ ನಿರತನಾಗಿದ್ಧೇನೆ. ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ. ಈಗ ಆ ವಿಚಾರವಾಗಿ ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ’ ಎಂದರು.

Advertisement
Tags :
Advertisement