ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಂಡಿಗೋ ವಿಮಾನದ ಪೈಲಟ್‌ ಮೇಲೆ ಹಲ್ಲೆ ಕೇಸ್: ಪ್ರಯಾಣಿಕನ ಬಂಧನ

ವಿಮಾನ ಟೇಕಾಫ್‌ ವಿಳಂಬದ ಬಗ್ಗೆ ಮಾಹಿತಿ ನೀಡುತ್ತಿದ್ದ ಇಂಡಿಗೋ ವಿಮಾನದ ಪೈಲಟ್‌ ಮೇಲೆ ಹಲ್ಲೆ ನಡೆಸಿದ ಘಟನೆ ಈಚೆಗೆ ನಡೆದಿತ್ತು. ಪ್ರಕರಣ ಸಂಬಂಧ ಆರೋಪಿತ ‌ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.
06:22 PM Jan 15, 2024 IST | Ashitha S

ನವದೆಹಲಿ: ವಿಮಾನ ಟೇಕಾಫ್‌ ವಿಳಂಬದ ಬಗ್ಗೆ ಮಾಹಿತಿ ನೀಡುತ್ತಿದ್ದ ಇಂಡಿಗೋ ವಿಮಾನದ ಪೈಲಟ್‌ ಮೇಲೆ ಹಲ್ಲೆ ನಡೆಸಿದ ಘಟನೆ ಈಚೆಗೆ ನಡೆದಿತ್ತು. ಪ್ರಕರಣ ಸಂಬಂಧ ಆರೋಪಿತ ‌ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.

Advertisement

ದೆಹಲಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಬಗ್ಗೆ ದೂರು ಬಂದಿದ್ದು, ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಡಿಸಿಪಿ ತಿಳಿಸಿದ್ದರು. ಪೈಲಟ್ ಮೇಲೆ ಹಲ್ಲೆ ಮಾಡಿದ ಬಳಿಕ ಇತರ ವಿಮಾನ ಸಿಬ್ಬಂದಿ ಹಾಗೂ ಪ್ರಯಾಣಿಕರು ಕಿರುಚುವ ಶಬ್ದ ವಿಡಿಯೊದಲ್ಲಿ ದಾಖಲಾಗಿತ್ತು.

ಪ್ರಯಾಣಿಕನ ವರ್ತನೆ ಸ್ವೀಕಾರಾರ್ಹವಲ್ಲ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದರು.

Advertisement

Advertisement
Tags :
indiaLatestNewsNewsKannadaಇಂಡಿಗೋ ವಿಮಾನನವದೆಹಲಿ
Advertisement
Next Article