ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಸ್ರೇಲ್‌ ಅಧ್ಯಕ್ಷರೊಂದಿಗೆ ಪ್ರಧಾನಿ ಮಾತುಕತೆ

ಇಸ್ರೇಲ್‌ ಹಮಾಸ್‌ ಸಂಘರ್ಷದಲ್ಲಿ ಸಾವಿರಾರು ಮಂದಿ ಪ್ರಾಣಕಳೆದುಕೊಂಡಿದ್ದಾರೆ. ಇದೀಗ ಕದನವಿರಾಮ ಘೋಷಣೆಯಾಗಿದೆ. ಈ ಮಧ್ಯೆ ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ.
07:49 AM Dec 02, 2023 IST | Ashika S

ದುಬೈ: ಇಸ್ರೇಲ್‌ ಹಮಾಸ್‌ ಸಂಘರ್ಷದಲ್ಲಿ ಸಾವಿರಾರು ಮಂದಿ ಪ್ರಾಣಕಳೆದುಕೊಂಡಿದ್ದಾರೆ. ಇದೀಗ ಕದನವಿರಾಮ ಘೋಷಣೆಯಾಗಿದೆ. ಈ ಮಧ್ಯೆ ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ.

Advertisement

ಈ ಸಂದರ್ಭದಲ್ಲಿ ಅವರು ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಇಸ್ರೇಲ್-ಪ್ಯಾಲೆಸ್ತೀನ್ ಸಮಸ್ಯೆಯ ಪರಿಹಾರಕ್ಕೆ ಭಾರತದ ಬೆಂಬಲವನ್ನು ಒತ್ತಿ ಹೇಳಿದ್ದಾರೆ.

ದುಬೈ ನಲ್ಲಿ ನಡೆದ ಸಿಒಪಿ28 ಶೃಂಗಸಭೆಯ ಸಂದರ್ಭದಲ್ಲಿ ಹೆರ್ಜೋಗ್ ಅವರನ್ನು ಭೇಟಿಯಾದ ಪ್ರಧಾನಿ ಮೋದಿ, ಅಕ್ಟೋಬರ್ 7 ರ ಭಯೋತ್ಪಾದಕ ದಾಳಿಯಲ್ಲಿನ ಜೀವಹಾನಿಯ ಬಗ್ಗೆ ಪ್ರಧಾನಿ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಒತ್ತೆಯಾಳುಗಳ ಬಿಡುಗಡೆಯನ್ನು ಸ್ವಾಗತಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.

Advertisement

ಅಕ್ಟೋಬರ್ 7 ರಂದು ಹಮಾಸ್ ಬಂಡುಕೋರರು ಮಾರಣಾಂತಿಕ ದಾಳಿ ನಡೆಸುವ ಮೂಲಕ ಯುದ್ಧ ಆರಂಭವಾಗಿದ್ದು, ಈ ಪ್ರದೇಶದಲ್ಲಿ ನಡೆಯುತ್ತಿರುವ ಇಸ್ರೇಲ್-ಹಮಾಸ್ ಸಂಘರ್ಷದ ಕುರಿತು ಮೋದಿ ಮತ್ತು ಹೆರ್ಜೋಗ್ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಸಂಕಷ್ಟದಲ್ಲಿರುವ ಜನರಿಗೆ ನಿರಂತರ ಮಾನವೀಯ ನೆರವು ಮತ್ತು ಸುರಕ್ಷತೆ ಅಗತ್ಯವನ್ನು ಪ್ರಧಾನ ಮಂತ್ರಿ ಪುನರುಚ್ಚರಿಸಿದರು ಎಂದು ಬಾಗ್ಚಿ ಹೇಳಿದ್ದಾರೆ.

Advertisement
Tags :
LatetsNewsNewsKannadaಇಸ್ರೇಲ್‌ಐಸಾಕ್ ಹೆರ್ಜೋಗ್ಕದನವಿರಾಮಘೋಷಣೆಪ್ರಧಾನಿ ನರೇಂದ್ರ ಮೋದಿಸಂಘರ್ಷಹಮಾಸ್
Advertisement
Next Article