ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ʻನಷ್ಟ ತುಂಬುವುದು ಕಷ್ಟʼ: ವಿಜಯಕಾಂತ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನಟ ಹಾಗೂ ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್  ಅವರು 71ನೇ ವಯಸ್ಸಿಗೆ ನಿಧನ ಹೊಂದಿದ್ದಾರೆ. ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಕೆಲ ದಿನಗಳಿಂದ ಅವರು ವೆಂಟಿಲೇಟರ್ ಸಹಾಯದಲ್ಲಿ ಇದ್ದರು. ಈಗ ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತಪಟ್ಟಿದ್ದಾರೆ. ‘ವಿಜಯಕಾಂತ್ ಅವರನ್ನು ವೆಂಟಿಲೇಟರ್ ಸಹಾಯದಲ್ಲಿ ಇಡಲಾಗಿತ್ತು.
11:15 AM Dec 28, 2023 IST | Ashitha S

ವದೆಹಲಿ: ನಟ ಹಾಗೂ ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್  ಅವರು 71ನೇ ವಯಸ್ಸಿಗೆ ನಿಧನ ಹೊಂದಿದ್ದಾರೆ. ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಕೆಲ ದಿನಗಳಿಂದ ಅವರು ವೆಂಟಿಲೇಟರ್ ಸಹಾಯದಲ್ಲಿ ಇದ್ದರು. ಈಗ ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತಪಟ್ಟಿದ್ದಾರೆ. ‘ವಿಜಯಕಾಂತ್ ಅವರನ್ನು ವೆಂಟಿಲೇಟರ್ ಸಹಾಯದಲ್ಲಿ ಇಡಲಾಗಿತ್ತು.

Advertisement

ಆದರೆ, ಎಷ್ಟೇ ಪ್ರಯತ್ನಿಸಿದರೂ ಅವರನ್ನು ಬದುಕಿಸಲು ಸಾಧ್ಯವಾಗಿಲ್ಲ. ಡಿಸೆಂಬರ್ 28ರ ಬೆಳಿಗ್ಗೆ ಅವರು ನಿಧನ ಹೊಂದಿದರು’ ಎಂದು ಆಸ್ಪತ್ರೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

"ತಿರು ವಿಜಯಕಾಂತ್ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ತಮಿಳು ಚಲನಚಿತ್ರ ಪ್ರಪಂಚದ ದಂತಕಥೆ, ಅವರ ವರ್ಚಸ್ವಿ ಅಭಿನಯವು ಲಕ್ಷಾಂತರ ಜನರ ಹೃದಯವನ್ನು ಗೆದ್ದಿದೆ. ರಾಜಕೀಯ ನಾಯಕರಾಗಿ, ಅವರು ಸಾರ್ವಜನಿಕ ಸೇವೆಗೆ ಆಳವಾಗಿ ಬದ್ಧರಾಗಿದ್ದರು, ತಮಿಳುನಾಡಿನ ರಾಜಕೀಯದ ಮೇಲೆ ಶಾಶ್ವತವಾದ ಪ್ರಭಾವವನ್ನು ಬೀರಿದರು. ನಷ್ಟ ತುಂಬುವುದು ಕಷ್ಟ. ಅವರು ಆತ್ಮೀಯ ಸ್ನೇಹಿತರಾಗಿದ್ದರು ಮತ್ತು ನಾನು ಅವರೊಂದಿಗಿನ ನನ್ನ ಸಂವಾದವನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇನೆ. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ಅವರ ಕುಟುಂಬ, ಅಭಿಮಾನಿಗಳು ಮತ್ತು ಹಲವಾರು ಅನುಯಾಯಿಗಳೊಂದಿಗೆ ಇದೆ. ಓಂ ಶಾಂತಿ" ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಬರೆದುಕೊಂಡು ಸಂತಾಪ ಸೂಚಿಸಿದ್ದಾರೆ.

Advertisement

Advertisement
Tags :
BJPBreakingNewsCongressCOVID 19deathindiaLatestNewsNewsKannadaನವದೆಹಲಿಪ್ರಧಾನಿ ನರೇಂದ್ರ ಮೋದಿವಿಜಯಕಾಂತ್
Advertisement
Next Article