ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಆದಿತ್ಯ-L1 ಮಿಷನ್‌ ಸಕ್ಸಸ್‌: ಪ್ರಧಾನಿ ಮೋದಿ ಪ್ರಸಂಶೆ

110 ದಿನಗಳ ಸುದೀರ್ಘ ಪ್ರಯಾಣದ ಬಳಿಕ ಇಸ್ರೋ ಆದಿತ್ಯ ಎಲ್1  ನೌಕೆಯು ‌15 ಲಕ್ಷ ಕಿಮೀ ಕ್ರಮಿಸಿ ಅಂತಿಮ ಕಕ್ಷೆ ತಲುಪಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ  ಅವರು ಪ್ರಸಂಶೆ ವ್ಯಕ್ತಪಡಿಸಿದ್ದಾರೆ.
05:58 PM Jan 06, 2024 IST | Ashika S

ಬೆಂಗಳೂರು: 110 ದಿನಗಳ ಸುದೀರ್ಘ ಪ್ರಯಾಣದ ಬಳಿಕ ಇಸ್ರೋ ಆದಿತ್ಯ ಎಲ್1  ನೌಕೆಯು ‌15 ಲಕ್ಷ ಕಿಮೀ ಕ್ರಮಿಸಿ ಅಂತಿಮ ಕಕ್ಷೆ ತಲುಪಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ  ಅವರು ಪ್ರಸಂಶೆ ವ್ಯಕ್ತಪಡಿಸಿದ್ದಾರೆ.

Advertisement

ಭಾರತ ಮತ್ತೊಂದು ಹೆಗ್ಗುರುತನ್ನು ಸೃಷ್ಟಿಸಿದೆ. ಭಾರತದ ಮೊದಲ ಸೌರ ವೀಕ್ಷಣಾಲಯ ಆದಿತ್ಯ-ಎಲ್1 ತನ್ನ ಗಮ್ಯಸ್ಥಾನವನ್ನು ತಲುಪಿದೆ. ಇದು ಅತ್ಯಂತ ಸಂಕೀರ್ಣ ಮತ್ತು ಸಂಕೀರ್ಣವಾದ ಬಾಹ್ಯಾಕಾಶ ಕಾರ್ಯಾಚರಣೆಗಳ ನಡುವೆ ಸಾಕ್ಷಾತ್ಕಾರದಲ್ಲಿ ನಮ್ಮ ವಿಜ್ಞಾನಿಗಳ ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ.

ಈ ಅಸಾಧಾರಣ ಸಾಧನೆಯನ್ನು ದೇಶದ ಜನತೆಯೊಂದಿಗೆ ಸೇರಿ ಶ್ಲಾಘಿಸುತ್ತೇನೆ. ಜೊತೆಗೆ ಮಾನವ ಪ್ರಯೋಜನಗಳಿಗಾಗಿ ವಿಜ್ಞಾನದ ಅನ್ವೇಷಣೆಗಳನ್ನು ಮುಂದುವರಿಸುತ್ತೇವೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Advertisement

ಸೆಪ್ಟೆಂಬರ್ 2 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಆದಿತ್ಯ-L1 ಏಳು ಪೇಲೋಡ್‌ಗಳೊಂದಿಗೆ ಉಡಾವಣೆಗೊಂಡಿತ್ತು.

ಭೂಮಿಯಿಂದ ಸುಮಾರು 15 ಲಕ್ಷ ಕಿಮೀ ದೂರದಲ್ಲಿರುವ L1 ಪಾಯಿಂಟ್‌ ಕಡೆಗೆ ಭೂ ಕಕ್ಷೆಯಿಂದ ಬಾಹ್ಯಾಕಾಶ  ನೌಕೆಯನ್ನು ಕಳುಹಿಸಿತ್ತು. ಶನಿವಾರ ಬೆಳಗ್ಗಿನಿಂದಲೇ ಹಾಲೋ ಆರ್ಬಿಟ್ ಅಳವಡಿಕೆಯ ಕಾರ್ಯವನ್ನು ಮುಂದುವರಿಸಿ ಲಗ್ರೇಂಜ್‌ ಪಾಯಿಂಟ್-1 ರಲ್ಲಿ ಇರಿಸಲು ಪ್ರಾರಂಭಿಸಿತ್ತು. ಅಂದುಕೊಂಡಂತೆ ಆದಿತ್ಯ ಎಲ್‌-1 ನೌಕೆಯು ನಿಗದಿತ ಕಕ್ಷೆ ತಲುಪಿದ್ದು, ದೊಡ್ಡ ಯಶಸ್ಸು ತಂದುಕೊಟ್ಟಿದೆ.

ಮತ್ತಷ್ಟು ಸುದ್ದಿಗಳಿಗಾಗಿ: ಬಾಹ್ಯಾಕಾಶದಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದ ಇಸ್ರೋ

Advertisement
Tags :
LatestNewsNewsKannadaಅಂತಿಮ ಕಕ್ಷೆಆದಿತ್ಯ-ಎಲ್1ನರೇಂದ್ರ ಮೋದಿನೌಕೆಪ್ರಧಾನಿಪ್ರಸಂಶೆ
Advertisement
Next Article