ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೊಹಮ್ಮದ್ ಶಮಿಯನ್ನು ಅಪ್ಪಿ ಸಂತೈಸಿದ ಪ್ರಧಾನಿ ಮೋದಿ: ಫೋಟೋ ವೈರಲ್‌

2023ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನದ ಹೊರತಾಗಿಯೂ ಟೀಂ ಇಂಡಿಯಾ ವಿಶ್ವ ಕಪ್ 2023 ಟ್ರೋಫಿಯನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಫೈನಲ್ ಪಂದ್ಯದಲ್ಲಿ ಭಾರತ ತಂಡಕ್ಕೆ ಹೀನಾಯವಾಗಿ ಸೋಲಿಸುವ ಮೂಲಕ ಆಸ್ಟ್ರೇಲಿಯಾ 2015ರ ಬಳಿಕ ಮತ್ತೊಮ್ಮೆ ವಿಶ್ವಕಪ್ ಟ್ರೋಫಿಯನ್ನು ಗೆದ್ದು ಬೀಗಿತು.
08:47 PM Nov 20, 2023 IST | Ashika S

ಅಹಮದಾಬಾದ್: 2023ರ ವಿಶ್ವಕಪ್ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನದ ಹೊರತಾಗಿಯೂ ಟೀಂ ಇಂಡಿಯಾ ವಿಶ್ವ ಕಪ್ 2023 ಟ್ರೋಫಿಯನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಫೈನಲ್ ಪಂದ್ಯದಲ್ಲಿ ಭಾರತ ತಂಡಕ್ಕೆ ಹೀನಾಯವಾಗಿ ಸೋಲಿಸುವ ಮೂಲಕ ಆಸ್ಟ್ರೇಲಿಯಾ 2015ರ ಬಳಿಕ ಮತ್ತೊಮ್ಮೆ ವಿಶ್ವಕಪ್ ಟ್ರೋಫಿಯನ್ನು ಗೆದ್ದು ಬೀಗಿತು.

Advertisement

ಪಂದ್ಯದ ಬಳಿಕ ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ಪ್ರಧಾನಿ ಮೋದಿ ಜೊತೆಗಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿ, ಪ್ರಧಾನಿ ಮೋದಿ ಅವರನ್ನು ತಬ್ಬಿಕೊಂಡು ಸಮಾಧಾನ ಮಾಡುತ್ತಿರುವುದನ್ನು ಕಾಣಬಹುದು.

ಈ ಚಿತ್ರವನ್ನು ಶಮಿ ಅವರೇ ಪೋಸ್ಟ್‌ ಮಾಡಿದ್ದು, ದುರದೃಷ್ಟವಶಾತ್‌ ನಿನ್ನೆ ನಮ್ಮ ದಿನವಲ್ಲ.ಪಂದ್ಯಾವಳಿಯುದ್ದಕ್ಕೂ ನಮ್ಮ ತಂಡ ಮತ್ತು ನಮ್ಮನ್ನು ಬೆಂಬಲಿಸಿದ್ದಕ್ಕಾಗಿ ನಾನು ಎಲ್ಲ ಭಾರತೀಯರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ವಿಶೇಷವಾಗಿ ಡ್ರೆಸ್ಸಿಂಗ್‌ ರೂಂಗೆ ಬಂದು ನಮ್ಮ ಉತ್ಸಾಹವನ್ನು ಹೆಚ್ಚಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ. ನಾವು ಮರಳಿ ಬರುತ್ತೇವೆ ಎಂದು ಶಮಿ ಬರೆದಿದ್ದಾರೆ.

Advertisement

Advertisement
Tags :
LatetsNewsNewsKannadaಆಸ್ಟ್ರೇಲಿಯಾಟೀಂ ಇಂಡಿಯಾಪಂದ್ಯಾವಳಿಪ್ರಧಾನಿ ಮೋದಿವಿಶ್ವ ಕಪ್ವಿಶ್ವಕಪ್
Advertisement
Next Article