For the best experience, open
https://m.newskannada.com
on your mobile browser.
Advertisement

10 ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು-ಕಲಬುರಗಿ, ಮೈಸೂರು-ಚೆನ್ನೈ ಸೇರಿದಂತೆ 10 ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಇಂದು (ಮಂಗಳವಾರ) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಇದೇ ವೇಳೆ ತಿರುವನಂತಪುರ-ಕಾಸರಗೋಡು ವಂದೇ ಭಾರತ್ ರೈಲು ಅನ್ನು ಮಂಗಳೂರಿಗೂ ವಿಸ್ತರಿಸಲು ಪ್ರಧಾನಿ ಮೋದಿ ಹಸಿರು ನಿಶಾನೆ ನೀಡಿದ್ದಾರೆ.
10:57 AM Mar 12, 2024 IST | Ashitha S
10 ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಹಮದಾಬಾದ್: ಬೆಂಗಳೂರು-ಕಲಬುರಗಿ, ಮೈಸೂರು-ಚೆನ್ನೈ ಸೇರಿದಂತೆ 10 ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಇಂದು (ಮಂಗಳವಾರ) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಇದೇ ವೇಳೆ ತಿರುವನಂತಪುರ-ಕಾಸರಗೋಡು ವಂದೇ ಭಾರತ್ ರೈಲು ಅನ್ನು ಮಂಗಳೂರಿಗೂ ವಿಸ್ತರಿಸಲು ಪ್ರಧಾನಿ ಮೋದಿ ಹಸಿರು ನಿಶಾನೆ ನೀಡಿದ್ದಾರೆ.

Advertisement

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಚಾಲನೆಯೊಂದಿಗೆ ಕಲಬುರಗಿ ಜನತೆಯ ಬಹುದಿನಗಳ ಬೇಡಿಕೆ ಈಡೇರಿದೆ. ಮತ್ತೊಂದೆಡೆ ಮೈಸೂರು-ಚೆನ್ನೈ ನಡುವೆ ಪ್ರತಿ ದಿನ ಈಗಾಗಲೇ ವಂದೇ ಭಾರತ್ ರೈಲು ಸಂಚರಿಸುತ್ತಿದ್ದು, ಇದು ಈ ಮಾದರಿಯ ಎರಡನೇ ರೈಲಾಗಿದೆ. ಮೈಸೂರಿನಿಂದ ವಿದ್ಯುತ್ ಮಾರ್ಗದ ಕಾಮಗಾರಿ ನಿಮಿತ್ತ ಸದ್ಯ ಈ ರೈಲು ಬೆಂಗಳೂರು-ಚೆನ್ನೈ ನಡುವೆ ಸಂಚರಿಸಲಿದ್ದು, ಏಪ್ರಿಲ್ 5ರಿಂದ ಮೈಸೂರಿನಿಂದ ಸೇವೆ ಆರಂಭಿಸಲಿದೆ.

10 ಹೊಸ ವಂದೇ ಭಾರತ್ ರೈಲುಗಳು

Advertisement

  • ಅಹಮದಾಬಾದ್-ಮುಂಬೈ ಸೆಂಟ್ರಲ್
  • ಸಿಕಂದರಾಬಾದ್-ವಿಶಾಖಪಟ್ಟಣ
  • ಮೈಸೂರು-ಡಾ.ಎಂಜಿಆರ್ ಸೆಂಟ್ರಲ್ (ಚೆನ್ನೈ)
  • ಪಟ್ನಾ-ಲಖನೌ
  • ನ್ಯೂ ಜಲ್‌ಪೈಗುರಿ-ಪಟ್ನಾ
  • ಪುರಿ-ವಿಶಾಖಪಟ್ಟಣ
  • ಲಖನೌ-ಡೆಹ್ರಾಡೂನ್
  • ಕಲಬುರಗಿ-ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು
  • ರಾಂಚಿ-ವಾರಾಣಸಿ
  • ಖಜುರಾಹೊ-ದೆಹಲಿ (ನಿಜಾಮುದ್ದೀನ್)

    ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ₹85,000 ಕೋಟಿ ಮೌಲ್ಯದ ರೈಲ್ವೆ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೇರವೇರಿಸಿದ್ದಾರೆ.

 

Advertisement
Tags :
Advertisement