ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಮ ಮಂದಿರ ನಿರ್ಮಾಣದ 'ಕಾರ್ಮಿಕʼರಿಗೆ ಪ್ರಧಾನಿಯಿಂದ ಪುಷ್ಪ ನಮನ

ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ್ ಲಲ್ಲಾ ಅವರ ಪ್ರತಿಮೆಯ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ನೆರವೇರಿಸಿದ ನಂತರ ಪ್ರಧಾನಿ ಮೋದಿ ಅವರು ಇಂದು ರಾಮ ಮಂದಿರ ನಿರ್ಮಾಣದಲ್ಲಿ ಕೆಲಸ ನಿರ್ವಹಿಸಿದ ಕಾರ್ಮಿಕರ ಮೇಲೆ ಹೂವಿನ ದಳಗಳನ್ನು ಸುರಿಸುವ ಮೂಲಕ ಪುಷ್ಪ ನಮನ ಸಲ್ಲಿಸಿದ್ದಾರೆ.
04:11 PM Jan 22, 2024 IST | Ashitha S

ವದೆಹಲಿ: ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ್ ಲಲ್ಲಾ ಅವರ ಪ್ರತಿಮೆಯ ಪ್ರಾಣ ಪ್ರತಿಷ್ಠಾ ಸಮಾರಂಭವನ್ನು ನೆರವೇರಿಸಿದ ನಂತರ ಪ್ರಧಾನಿ ಮೋದಿ ಅವರು ಇಂದು ರಾಮ ಮಂದಿರ ನಿರ್ಮಾಣದಲ್ಲಿ ಕೆಲಸ ನಿರ್ವಹಿಸಿದ ಕಾರ್ಮಿಕರ ಮೇಲೆ ಹೂವಿನ ದಳಗಳನ್ನು ಸುರಿಸುವ ಮೂಲಕ ಪುಷ್ಪ ನಮನ ಸಲ್ಲಿಸಿದ್ದಾರೆ.

Advertisement

ಇನ್ನು  ಅಯೋಧ್ಯೆಯಲ್ಲಿ ವಿಧಿವಿಧಾನಗಳನ್ನು ನೆರವೇರಿಸಿದ ಪ್ರಧಾನಿ ಮೋದಿ ಅವರು ರಾಮನ ಪಾದಗಳಿಗೆ ಪುಷ್ಪ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಆರ್‌ಎಸ್‌ಎಸ್‌ ಮುಖಂಡ ಮೋಹನ್‌ ಭಾಗವತ್‌ ಅವರೊಂದಿಗೆ ಸೇರಿ ಆರತಿ ಬೆಳಗಿದರು. ಈ ವೇಳೆ ದೇವಾಲಯದ ಒಳಗೆ ನೆರೆದವರ ಶ್ರೀರಾಮ ಜಯರಾಮ ಎಂಬ ರಾಮನಾಮ ಮುಗಿಲುಮುಟ್ಟಿತ್ತು. ಮಂತ್ರಘೋಷಗಳು ಮೊಳಗಿದ್ದವು, ವಾದ್ಯಗಳ ನಾದ ದೇವಾಲಯವನ್ನು ಆವರಿಸಿತ್ತು.

ಈ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಗುಜರಾತ್ ಮಾಜಿ ಸಿಎಂ ಆನಂದಿ ಬೇನ್ ಪಟೇಲ್, ಇಬ್ಬರು ಪ್ರಧಾನ ಅರ್ಚಕರು ಗರ್ಭಗುಡಿಯಲ್ಲಿದ್ದರು. ಮೋದಿಯವರ ಸಮ್ಮುಖದಲ್ಲಿ ಬಾಲರಾಮನ ವಿಗ್ರಹವನ್ನು ಅನಾವರಣಗೊಳಿಸುತ್ತಿದ್ದಂತೆ ಭಾರತೀಯ ವಾಯುಪಡೆ (ಐಎಎಫ್) ಹೆಲಿಕಾಪ್ಟರ್‌ಗಳು ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇವಾಲಯದ ಮೇಲೆ ಹೂವಿನ ಮಳೆಗೈದವು.

Advertisement

 

Advertisement
Tags :
indiaKARNATAKALatestNewsNewsKannadaನವದೆಹಲಿಪುಷ್ಪ ನಮನಪ್ರಾಣ ಪ್ರತಿಷ್ಠಾರಾಮ ಮಂದಿರ
Advertisement
Next Article