ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರು: ನಾಲ್ವರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ ಪೊಲೀಸರು

ಖಚಿತ ಮಾಹಿತಿ ಮೇರೆಗೆ ನೆಲಮಂಗಲ ಪೊಲೀಸರು ಮನೆಯೊಂದರ ಮೇಲೆ ದಾಳಿ ನಡೆಸಿ ನಾಲ್ವರು ಡ್ರಗ್ಸ್ ಪೆಡ್ಲರ್ ಗಳನ್ನು  ಬಂಧಿಸಿದ್ದಾರೆ.
10:49 AM Dec 28, 2023 IST | Ashika S

ಬೆಂಗಳೂರು:  ಖಚಿತ ಮಾಹಿತಿ ಮೇರೆಗೆ ನೆಲಮಂಗಲ ಪೊಲೀಸರು ಮನೆಯೊಂದರ ಮೇಲೆ ದಾಳಿ ನಡೆಸಿ ನಾಲ್ವರು ಡ್ರಗ್ಸ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ.

Advertisement

ಬಂಧಿತರನ್ನು ಗಂಗೊಂಡನಹಳ್ಳಿ ಅನಿಲ್ (21), ಅಂದ್ರಹಳ್ಳಿ ಕಾರ್ತಿಕ್ (18), ನವೀನ್ (20) ಮತ್ತು ದೊಂಬರಹಳ್ಳಿ ಮಂಜುನಾಥ್ (19) ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ 2 ಕೆಜಿ ಗಾಂಜಾ, ಎರಡು ಬೈಕ್ ಹಾಗೂ ಚಾಕುಗಳನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Advertisement

ಆರಂಭಿಕ ವಿಚಾರಣೆಯಲ್ಲಿ ಹೊಸ ವರ್ಷದ ಮುನ್ನಾದಿನದಂದು ಗ್ರಾಹಕರಿಗೆ ಡ್ರಗ್ಸ್ ಸರಬರಾಜು ಮಾಡಲು ಭಾರಿ ಮೊತ್ತದ ಆರ್ಡರ್ ತೆಗೆದುಕೊಂಡಿರುವುದು ಗೊತ್ತಾಗಿದೆ. ಶೀಘ್ರ ಹಣ ಗಳಿಸಲು ಹಾಗೂ ಐಷಾರಾಮಿ ಜೀವನ ನಡೆಸಲು ಮಾದಕ ವಸ್ತು ಮಾರಾಟ ಮಾಡುತ್ತಿದ್ದರು ಎಂದು ಆರೋಪಿಗಳು ವಿಚಾರಣೆ ವೇಳೆ ತಿಳಿಸಿದ್ದಾರೆ.

ಆರೋಪಿಗಳು ಡಿ.31ರಂದು ವಿವಿಧೆಡೆ ಡ್ರಗ್ಸ್ ಸರಬರಾಜು ಮಾಡಲು ಅಪಾರ ಪ್ರಮಾಣದ ಆರ್ಡರ್ ಪಡೆದಿದ್ದರು.

Advertisement
Tags :
LatetsNewsNewsKannadaಡ್ರಗ್ಸ್ ಪೆಡ್ಲರ್ಸ್ದಾಳಿನೆಲಮಂಗಲಪೊಲೀಸರುಮನೆ
Advertisement
Next Article