ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಶ್ಲೀಲ ವಿಡಿಯೋ ಪ್ರಕರಣ: ರಾಖಿ ಸಾವಂತ್ ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ನ್ಯಾಯಾಲಯ

ಅಶ್ಲೀಲ ವಿಡಿಯೋ ಪೋಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ರಾಖಿ ಸಾವಂತ್ ಗೆ ಮುಂಬೈ ನ್ಯಾಯಾಲಯವು ನಿರೀಕ್ಷಣಾ ಜಾಮೀನು  ನೀಡಲು ನಿರಾಕರಿಸಿದೆ.
07:38 PM Jan 13, 2024 IST | Ashika S

ಮುಂಬೈ: ಅಶ್ಲೀಲ ವಿಡಿಯೋ ಪೋಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ರಾಖಿ ಸಾವಂತ್ ಗೆ ಮುಂಬೈ ನ್ಯಾಯಾಲಯವು ನಿರೀಕ್ಷಣಾ ಜಾಮೀನು  ನೀಡಲು ನಿರಾಕರಿಸಿದೆ.

Advertisement

ಈ ಹಿಂದೆ ತಮ್ಮ ಮಾಜಿಪತಿ ಅನಿಲ್ ದುರಾನಿ  ಅವರ ಅಶ್ಲೀಲ ವಿಡಿಯೋವನ್ನು ರಾಖಿ ಸಾವಂತ್ ಸೋಷಿಯಲ್ ಮೀಡಿಯಾದಲ್ಲಿ ರಿಲೀಸ್ ಮಾಡಿದ್ದರು.

ಮುಂಬೈಯ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಸ್ವತಃ ಮಾಜಿಪತ್ನಿಯ ವಿರುದ್ಧವೇ ದುರಾನಿ ದೂರು ನೀಡಿದ್ದರು. ತಮ್ಮ ಖಾಸಗಿ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ತಮ್ಮ ಮಾನಹಾನಿ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.

Advertisement

ದೂರು ದಾಖಲಾಗುತ್ತಿದ್ದಂತೆಯೇ ರಾಖಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಶ್ರೀಕಾಂತ್ ವೈ ಭೋಂಸ್ಲೆ ಅವರು ಅರ್ಜಿಯನ್ನು ವಜಾಗೊಳಿಸಿದ್ದಾರೆ.

ರಾಖಿ ಬಿಡುಗಡೆ ಮಾಡಿರುವ ವಿಡಿಯೋ ಅಶ್ಲೀಲವಾಗಿವೆ ಎಂದು ಕೋರ್ಟ್ ಈ ಸಂದರ್ಭದಲ್ಲಿ ಅಭಿಪ್ರಾಯ ಪಟ್ಟಿದೆ.

Advertisement
Tags :
LatestNewsNewsKannadaಅಶ್ಲೀಲ ವಿಡಿಯೋನಟಿನಿರೀಕ್ಷಣಾ ಜಾಮೀನುನ್ಯಾಯಾಲಯಪೋಸ್ಟ್ರಾಖಿ ಸಾವಂತ್
Advertisement
Next Article