ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪೌರಕಾರ್ಮಿಕರನ್ನ ಬೇರೆ ಕೆಲಸಗಳಿಗೆ ನಿಯೋಜಿಸಿದರೆ ಶಿಸ್ತು ಕ್ರಮ

ಪೌರಕಾರ್ಮಿಕರನ್ನ ಬೇರೆ ಕೆಲಸಗಳಿಗೆ ನಿಯೋಜಿಸಲಾಗುತ್ತಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ, ಸರ್ಕಾರ ನಿಗದಿಪಡಿಸಿದ ಕರ್ತವ್ಯಗಳನ್ನು ಹೊರತುಪಡಿಸಿ ಬೇರೆ ಕೆಲಸಗಳಿಗೆ ನಿಯೋಜನೆ ಮಾಡುವ ಹಾಗಿಲ್ಲ ಎಂದು ಪೌರಾಡಳಿತ ನಿರ್ದೇಶನಾಲಯ ಇಲಾಖೆ ಸುತ್ತೋಲೆ ಹೊರಡಿಸಿದೆ.
08:10 AM Jan 20, 2024 IST | Ashika S

ಬೆಂಗಳೂರು: ಪೌರಕಾರ್ಮಿಕರನ್ನ ಬೇರೆ ಕೆಲಸಗಳಿಗೆ ನಿಯೋಜಿಸಲಾಗುತ್ತಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ, ಸರ್ಕಾರ ನಿಗದಿಪಡಿಸಿದ ಕರ್ತವ್ಯಗಳನ್ನು ಹೊರತುಪಡಿಸಿ ಬೇರೆ ಕೆಲಸಗಳಿಗೆ ನಿಯೋಜನೆ ಮಾಡುವ ಹಾಗಿಲ್ಲ ಎಂದು ಪೌರಾಡಳಿತ ನಿರ್ದೇಶನಾಲಯ ಇಲಾಖೆ ಸುತ್ತೋಲೆ ಹೊರಡಿಸಿದೆ.

Advertisement

ಪೌರಕಾರ್ಮಿಕರನ್ನ ಬೇರೆ ಕೆಲಸಗಳಿಗೆ ನಿಯೋಜನೆಗೆ ಸೂಚಿಸಿದವರು ಮತ್ತು ಅವರಿಂದ ಸೇವೆ ಪಡೆದವರ ಮೇಲೂ ಶಿಸ್ತು ಕ್ರಮ ಕೈಗೊಳ್ಳಲಾವುವುದು ಇಲಾಖೆ ಎಚ್ಚರಿಕೆ ನೀಡಿದೆ.

ಒಂದು ವೇಳೆ ಪೌರಕಾರ್ಮಿಕರಿಗೆ ನಿಗದಿಪಡಿಸಿದ ಕರ್ತವ್ಯಗಳನ್ನು ಹೊರತುಪಡಿಸಿ ಇತರೇ ಅನ್ಯ ಕೆಲಸ ಕಾರ್ಯಗಳಿಗೆ ನಿಯೋಜಿಸುವುದು ಕಂಡು ಬಂದಲ್ಲಿ ಅಥವಾ ನಿರ್ದೇಶನಾಲಯಕ್ಕೆ ದೂರು ಸ್ವೀಕೃತವಾದಲ್ಲಿ, ಅನ್ಯ ಕಾರ್ಯಗಳಿಗೆ ನಿಯೋಜಿಸಿದ ಸಂಬಂಧಿಸಿದ ಅಧಿಕಾರಿ/ಸಿಬ್ಬಂದಿಯನ್ನು ಮತ್ತು ಅವರ ಸೇವೆಯನ್ನು ಪಡೆಯುವವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಇಲಾಖೆ ತಿಳಿಸಿದೆ.

Advertisement

ರಾಜ್ಯದ ಎಲ್ಲಾ ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಅಧಿಸೂಚಿತ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗೆ ಸರ್ಕಾರ ನಿಗದಿಪಡಿಸಿದ ಕರ್ತವ್ಯಗಳ ಬದಲಾಗಿ ಇತರೆ ಅನ್ಯ ಕೆಲಸ ಕಾರ್ಯಗಳಿಗೆ ನಿಯೋಜಿಸುತ್ತಿರುವ ಕುರಿತು ನಿರ್ದೇಶನಾಲಯಕ್ಕೆ ದೂರುಗಳು ಬಂದಿರುವ ಹಿನ್ನಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.

Advertisement
Tags :
LatetsNewsNewsKannadaಕರ್ತವ್ಯಕೆಲಸದೂರುನಿಯೋಜನೆಪೌರಕಾರ್ಮಿಕಸರ್ಕಾರಸುತ್ತೋಲೆ
Advertisement
Next Article