For the best experience, open
https://m.newskannada.com
on your mobile browser.
Advertisement

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್ ಜಾರಿಯಾಗಿದೆ. ಬೆಂಗಳೂರಿನ ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯವು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿದೆ.
10:08 AM May 19, 2024 IST | Ashitha S
ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್ ಜಾರಿಯಾಗಿದೆ. ಬೆಂಗಳೂರಿನ ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯವು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿದೆ.

Advertisement

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಮೂರು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇದು ಅವರ ವಿರುದ್ಧ ಹೊರಡಿಸಲಾದ ಮೊದಲ ವಾರಂಟ್ ಆಗಿದೆ. ಪ್ರಜ್ವಲ್ ಅವರ ತಂದೆ ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ ಕೂಡ ಆರೋಪಿಯಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಈ ವಾರಂಟ್ ಹೊರಡಿಸಿದೆ.

ಅರೆಸ್ಟ್ ವಾರಂಟ್ ಹೊರಡಿಸಿರುವುದು ಅವರ ಪಾಸ್‌ಪೋರ್ಟ್ ರದ್ದುಪಡಿಸುವ ಮೊದಲ ಹೆಜ್ಜೆಯಾಗಿದೆ. ಈ ವಾರಂಟ್ ಅವರು ದೇಶಕ್ಕೆ ವಾಪಸ್ ಆಗುವಂತೆ ಮಾಡುತ್ತದೆ. ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿದ್ದ ಮನವಿಯ ಮೇರೆಗೆ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ವಾರಂಟ್ ಹೊರಡಿಸಿದೆ.

Advertisement

ಲೈಂಗಿಕ ಕಿರುಕುಳದ ಅನೇಕ ಪ್ರಕರಣಗಳ ಆರೋಪ ಹೊತ್ತಿರುವ ಪ್ರಜ್ವಲ್ ರೇವಣ್ಣ ಅವರು ಏಪ್ರಿಲ್ 27 ರ ಬೆಳ್ಳಂಬೆಳಗ್ಗೆ ದೇಶದಿಂದ ಜರ್ಮನಿಗೆ ಪರಾರಿಯಾಗಿದ್ದಾರೆ. ಇಂಟರ್‌ಪೋಲ್ ಅವರ ಪ್ರಸ್ತುತ ಸ್ಥಳವನ್ನು ಕೋರಿ ಅದರ 196 ಸದಸ್ಯ ರಾಷ್ಟ್ರಗಳಿಗೆ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ.

Advertisement
Tags :
Advertisement