ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ: 40 ಜಿಬಿಯ ಪೆನ್ ಡ್ರೈವ್‍ ವಶಕ್ಕೆ ಪಡೆದ ವಿಶೇಷ ತನಿಖಾ ತಂಡ

ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ ಅಧಿಕಾರಿಗಳು ಒಟ್ಟು 40 ಜಿಬಿಯ ಪೆನ್ ಡ್ರೈವ್‍ಗಳನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
08:52 AM Apr 30, 2024 IST | Chaitra Kulal

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ ಅಧಿಕಾರಿಗಳು ಒಟ್ಟು 40 ಜಿಬಿಯ ಪೆನ್ ಡ್ರೈವ್‍ಗಳನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Advertisement

32 ಜಿಬಿ ಮತ್ತು 8 ಜಿಬಿ ಎರಡು ಪೆನ್ ಡ್ರೈವ್‍ಗಳು ವಶಕ್ಕೆ ಪಡೆದಿರುವ ಅಧಿಕಾರಿಗಳು ಸತ್ಯಾಸತ್ಯತೆ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ. ಈ ಎರಡು ಪೆನ್‍ಡ್ರೈವ್‍ಗಳನ್ನು ಎಫ್‍ಎಸ್‍ಎಲ್‍ಗೆ ರವಾನೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ.

ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆನರಸಿಪುರ ಟೌನ್ ಪೊಲೀಸ್ ಠಾಣೆಯಲ್ಲಿ ಹಾಸನ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಸಂತ್ರಸ್ತೆಯಿಂದ ದೂರು ದಾಖಲಾಗಿದೆ. ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇರೆಗೆ  ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

Advertisement

ಐಪಿಸಿ ಸೆಕ್ಷನ್ 354 (ಎ) ಲೈಂಗಿಕ ಕಿರುಕುಳ, 354 (ಡಿ) (ಮಹಿಳೆಗೆ ಮುಜುಗರ ಆಗುವಂತೆ ಹಿಂಬಾಲಿಸುವುದು), 506 (ಬೆದರಿಕೆ), 509 (ಮಹಿಳೆ ಮಾನಕ್ಕೆ ಹಾನಿ ಉಂಟುಮಾಡುವುದು) ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಈ ಪ್ರಕರಣದ ಸಮಗ್ರ ತನಿಖೆಯನ್ನೂ ನಿರ್ವಹಿಸುವಂತೆ ಎಸ್‍ಐಟಿಗೆ ಆದೇಶಿಸಿದೆ.

ಎಸ್‍ಐಟಿ ತನಿಖೆಯಲ್ಲಿ ಬೆಂಗಳೂರಿನ ಎಡಿಜಿಪಿ ಬಿಜಯಕುಮಾರ್ ಸಿಂಗ್, ಸಹಾಯಕ ಪೊಲೀಸ್ ಮಹಾ ನಿರೀಕ್ಷಕರಾದ ಸುಮನ್ ಡಿ. ಪನ್ನೇಕರ್ ಹಾಗೂ ಮೈಸೂರು ಎಸ್ಪಿ ಸೀಮಾ ಲಾಠ್ಕರ್ ಅವರನ್ನೊಳಗೊಂಡ ತಂಡವಿದ್ದು, ಬಿಜಯ ಕುಮಾರ್ ಸಿಂಗ್ ತಂಡದ ಮುಖ್ಯಸ್ಥರಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Advertisement
Tags :
40 GB pen driveBANGALORENewsKarnatakaPRAJWAL REVANNASpecial Investigationvideo case
Advertisement
Next Article