ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪ್ರಜ್ವಲ್‌ ವಿಡಿಯೋ ಪ್ರಕರಣ, ನಾಡಿನ ಮಾನವನ್ನು ಹರಾಜು ಹಾಕಿದೆ: ಮಾರಸಂದ್ರ ಮುನಿಯಪ್ಪ

ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ತಂದೆ, ಶಾಸಕ ರೇವಣ್ಣ ಅವರು ಅಮಾಯಕ ಬಡ ಹೆಣ್ಣುಮಕ್ಕಳ ಮೇಲೆ ನಡೆಸಿರುವ ಲೈಂಗಿಕ ದೌರ್ಜನ್ಯ ಪ್ರಕರಣವು ನಾಡಿನ ಮಾನವನ್ನು ಹರಾಜು ಹಾಕಿದೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ದೂರಿದ್ದಾರೆ.
07:38 AM May 03, 2024 IST | Chaitra Kulal

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ತಂದೆ, ಶಾಸಕ ರೇವಣ್ಣ ಅವರು ಅಮಾಯಕ ಬಡ ಹೆಣ್ಣುಮಕ್ಕಳ ಮೇಲೆ ನಡೆಸಿರುವ ಲೈಂಗಿಕ ದೌರ್ಜನ್ಯ ಪ್ರಕರಣವು ನಾಡಿನ ಮಾನವನ್ನು ಹರಾಜು ಹಾಕಿದೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ದೂರಿದ್ದಾರೆ.

Advertisement

ಮಿತ್ರ ಪಕ್ಷದ ಅಭ್ಯರ್ಥಿಯ ಲೈಂಗಿಕ ಪುರಾಣ ಬೀದಿಬೀದಿಗಳಲ್ಲಿ ಹರಾಜಾಗುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಜಾಣ ಮೌನ ವಹಿಸಿದ್ದಾರೆ. ಈ ಅನೈತಿಕ ಕತೆ ಮೊದಲೇ ಗೊತ್ತಿದ್ದರೂ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ವಿದೇಶಕ್ಕೆ ಹೋಗಲು ನೆರವಾಗಿದ್ದಾರೆ ಎಂದು ಆರೋಪ ಮಾಡಿದರು.

ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಸದಸ್ಯನನ್ನು ಅಮಾನತು ಮಾಡಿರುವುದು ದೊಡ್ಡ ಶಿಕ್ಷೆಯಲ್ಲ. ಪಕ್ಷದಿಂದ ಉಚ್ಚಾಟಿಸಿ, ವಿದೇಶದಿಂದ ಕರೆತಂದು ಪೊಲೀಸರಿಗೆ ಒಪ್ಪಿಸಿದರೆ ಗೌಡರ ಕುಟುಂಬದ ಪ್ರಾಮಾಣಿಕತೆ, ನ್ಯಾಯಪ್ರಜ್ಞೆ ಮೆಚ್ಚಬಹುದಿತ್ತು. ಆದರೆ ಅಮಾನತು ಮಾಡಿ ಕಣ್ಣೊರೆಸುವ ನಾಟಕ ವಾಡಿದ್ದಾರೆ ಎಂದರು.

Advertisement

ಸಿದ್ದರಾಮಯ್ಯ ಅವರ ಸರ್ಕಾರವು ಈ ಪ್ರಕರಣವನ್ನು ಎಸ್‌ಐಟಿಗೆ ವಹಿಸಿರು ವುದು ಉತ್ತಮ ಸಂಗತಿ.. ತನಿಖೆ ಪಾರದರ್ಶಕ ವಾಗಿ ನಡೆದು, ಸಾಕ್ಷ್ಯ ನಾಶವಾಗದಂತೆ ನೋಡಿಕೊಳ್ಳಬೇಕು. ಸಂತ್ರಸ್ತೆಯರಿಗೆ ರಕ್ಷಣೆ ನೀಡಬೇಕು ಎಂದರು.

Advertisement
Tags :
BANGALORECASELatestNewsMarasandra MuniappaNewsKarnatakaVideo
Advertisement
Next Article