For the best experience, open
https://m.newskannada.com
on your mobile browser.
Advertisement

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್​ಗೆ ಅನಾರೋಗ್ಯ ಆಸ್ಪತ್ರೆಗೆ ದಾಖಲು !

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್​ ಗೆ ಅನಾರೋಗ್ಯ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರತಿಭಾ ಪಾಟೀಲ್ ಅವರು ಜ್ವರ ಮತ್ತು ಎದೆ ಸೋಂಕಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಪಾಟೀಲ್ (89) ಅವರನ್ನು ಬುಧವಾರ ಭಾರತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
10:43 AM Mar 14, 2024 IST | Ashitha S
ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್​ಗೆ ಅನಾರೋಗ್ಯ ಆಸ್ಪತ್ರೆಗೆ ದಾಖಲು

ದೆಹಲಿ: ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್​ ಗೆ ಅನಾರೋಗ್ಯ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರತಿಭಾ ಪಾಟೀಲ್ ಅವರು ಜ್ವರ ಮತ್ತು ಎದೆ ಸೋಂಕಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಪಾಟೀಲ್ (89) ಅವರನ್ನು ಬುಧವಾರ ಭಾರತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Advertisement

ಕಳೆದ ವರ್ಷ ಫೆಬ್ರವರಿಯಲ್ಲಿ ಮಾಜಿ ರಾಷ್ಟ್ರಪತಿ ಪಾಟೀಲ್ ಅವರ ಪತಿ ದೇವಿಸಿಂಗ್ ಶೇಖಾವತ್ ಅವರು ಹೃದಯಾಘಾತದಿಂದ 89 ನೇ ವಯಸ್ಸಿನಲ್ಲಿ ನಿಧನರಾಗಿದ್ದರು. ಪಾಟೀಲ್ ಅವರು 2007 ರಿಂದ 2012 ರವರೆಗೆ ಸೇವೆ ಸಲ್ಲಿಸಿದ ಭಾರತದ ಗೌರವಾನ್ವಿತ ಸ್ಥಾನವನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಇತಿಹಾಸವನ್ನು ನಿರ್ಮಿಸಿದರು.

ಪ್ರತಿಭಾ ಪಾಟೀಲ್‌ ಅವರು ಭಾರತ ದೇಶದ ಮೊದಲ ಮಹಿಳಾ ರಾಷ್ಟ್ರಪತಿ. ಇವರು ರಾಜಸ್ಥಾನದ ಮೊದಲ ಮಹಿಳಾ ರಾಜ್ಯಪಾಲೆ ಕೂಡ ಹೌದು. 1986ರಿಂದ 1988ರವರಗೆ ರಾಜ್ಯಸಭೆಯ ಉಪಾಧ್ಯಕ್ಷರಾಗಿಯೂ ಸೇವೆಸಲ್ಲಿಸಿದ್ದಾರೆ. ಇವರು, ಮಹಾರಾಷ್ಟ್ರ ಸರಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ, ಸಾರ್ವಜನಿಕ ಆರೋಗ್ಯ ಸಚಿವರಾಗಿ, ಶಿಕ್ಷಣ ಸಚಿವರಾಗಿ, ಪುನರ್ವಸತಿ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಸಚಿವರಾಗಿ ಹಾಗೂ ನಾಗರಿಕ ಸರಬರಾಜು ಮತ್ತು ನಗರಾಭಿವೃದ್ಧಿ ಸಚಿವರಾಗಿ ಕೆಲಸ ಮಾಡಿದ್ದಾರೆ.

Advertisement

ಒಂದು ವರ್ಷ ಮಹಾರಾಷ್ಟ್ರ ಸರಕಾರದಲ್ಲಿ ವಿರೋಧ ಪಕ್ಷದ ನಾಯಕಿ ಕೂಡ ಆಗಿದ್ದರು. ರಾಜ್ಯಸಭೆಯ ವ್ಯವಹಾರ ಸಲಹಾ ಸಮಿತಿಯ ಸದಸ್ಯರು ಹಾಗೂ ಕೇಂದ್ರ ವಸತಿ ಸಮಿತಿಯ ಚೇರ್ಮನ್‌ ಕೂಡ ಆಗಿದ್ದರು. ಇವರು, ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲಾ ಶಿಕ್ಷಣಗಳನ್ನು ಜಲಗಾಮ್‌ನ ಆರ್‌.ಆರ್‌.ಸ್ಕೂಲ್‌ನಲ್ಲಿ ಮಾಡಿದರು. ನಂತರ ಪದವಿಯನ್ನು ಜೇತಾ ಕಾಲೇಜ್‌ (ಎಂ.ಜೆ)ನಲ್ಲಿ ಪೂರೈಸಿದರು. ಇವರು 1962ರಲ್ಲಿ ಇಂಡಿಯನ್‌ ನ್ಯಾಷನಲ್‌ ಕಾಂಗ್ರೆಸ್‌ ಟಿಕೆಟ್‌ ಪಡದು ಲೋಕಸಭೆಗೆ ಆಯ್ಕೆಯಾಗಿದ್ದರು. ಇವರು ಡಿಸೆಂಬರ್‌ 19, 1934ರಲ್ಲಿ ಮಹಾರಾಷ್ಟ್ರದ ನಾಡ್‌ಗಾವ್‌ನಲ್ಲಿ ಜನಿಸಿದರು.

Advertisement
Tags :
Advertisement