For the best experience, open
https://m.newskannada.com
on your mobile browser.
Advertisement

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ‌ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
11:04 AM May 10, 2024 IST | Ashitha S
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ಮಂಗಳೂರು: ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ‌ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

2022 ರಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿತ್ತು. ಬಳಿಕ ಹಲವಾರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಪ್ರಮುಖ ಆರೋಪಿಗಳು ಪೊಲೀಸರ ಕೈಗೆ ಸಿಗದೆ ತಲೆ ಮರೆಸಿಕೊಂಡಿದ್ದರು. ಇದೀಗ ಪ್ರಮುಖ ಆರೋಪಿ ಮೊಹಮ್ಮದ್ ಮುಸ್ತಾಫಾ ಅಲಿಯಾಸ್ ಮುಸ್ತಾಫಾ ಪೈಚಾರ್ ಅನ್ನು ಹಾಸನದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಈತನ ವಿಚಾರಣೆಯಲ್ಲಿ ಹಲವು ವಿಷಯಗಳನ್ನು ಬಹಿರಂಗಗೊಳ್ಳಲಿದೆ

Advertisement
Advertisement
Tags :
Advertisement