For the best experience, open
https://m.newskannada.com
on your mobile browser.
Advertisement

ಸಂವಿಧಾನ ತಿದ್ದುಪಡಿ ಮಾಡುತ್ತೇವೆ, ದೇಶದಲ್ಲಿ ಜಾತಿ ಗಣತಿ ಜಾರಿ ಮಾಡ್ತೇವೆ: ಪ್ರಿಯಾಂಕಾ

ಲೋಕಸಬಾ ಚುನಾವಣಾ ಹಿನ್ನಲೆ ಭರ್ಜರಿಯಾಗಿ ಪ್ರಚಾರ ನಡೆಯುತ್ತಿದ್ದು, ಪ್ರಿಯಾಂಕಾ ಗಾಂಧಿ ಕರ್ನಾಟಕಕ್ಕೆ ಬಂದಿದ್ದು, ಚಿತ್ರದುರ್ಗ ಸಮಾವೇಶದಲ್ಲಿ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಹೇಳಿದ್ದಾರೆ.
07:26 PM Apr 23, 2024 IST | Nisarga K
ಸಂವಿಧಾನ ತಿದ್ದುಪಡಿ ಮಾಡುತ್ತೇವೆ  ದೇಶದಲ್ಲಿ ಜಾತಿ ಗಣತಿ ಜಾರಿ ಮಾಡ್ತೇವೆ  ಪ್ರಿಯಾಂಕಾ
ಸಂವಿಧಾನ ತಿದ್ದುಪಡಿ ಮಾಡುತ್ತೇವೆ, ದೇಶದಲ್ಲಿ ಜಾತಿ ಗಣತಿ ಜಾರಿ ಮಾಡ್ತೇವೆ: ಪ್ರಿಯಾಂಕಾ

ಚಿತ್ರದುರ್ಗ: ಲೋಕಸಬಾ ಚುನಾವಣಾ ಹಿನ್ನಲೆ ಭರ್ಜರಿಯಾಗಿ ಪ್ರಚಾರ ನಡೆಯುತ್ತಿದ್ದು, ಪ್ರಿಯಾಂಕಾ ಗಾಂಧಿ ಕರ್ನಾಟಕಕ್ಕೆ ಬಂದಿದ್ದು, ಚಿತ್ರದುರ್ಗ ಸಮಾವೇಶದಲ್ಲಿ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಹೇಳಿದ್ದಾರೆ. ಈ ಮೂಲಕ ಮಹಿಳೆಯರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದ್ದಾರೆ. ಸಂವಿಧಾನ ತಿದ್ದುಪಡಿ ಮಾಡಿ ಶೇಕಡಾ 50ರಷ್ಟು ಮೀಸಲಾತಿ ಕೊಡುತ್ತೇವೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

Advertisement

ಎಸ್​ಸಿ, ಎಸ್​ಟಿಗೆ ವಿಶೇಷ ಅನುದಾನವನ್ನು ನೀಡುತ್ತೇವೆ. ಇಡೀ ದೇಶದಲ್ಲಿ ಜಾತಿ ಗಣತಿಯನ್ನ ಜಾರಿ ಮಾಡುತ್ತೇವೆ ಎಂದು ಕಾಂಗ್ರೆಸ್​ ನಾಯಕಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಕಾಡುಗೊಲ್ಲ ಸಮಾಜವನ್ನು ಎಸ್​ಟಿಗೆ ಸೇರಿಸಲಾಗುತ್ತದೆ. ರೈತರಿಗೆ ಬೆಂಬಲ ಬೆಲೆ, ಕೃಷಿಗೆ GST ಮುಕ್ತಗೊಳಿಸ್ತೇವೆ. ಭೂಮಿ‌ ಇಲ್ಲದವರಿಗೆ ಭೂಮಿ ನೀಡುತ್ತೇವೆ. ಬೆಳೆ ನಷ್ಟವಾದವರಿಗೆ 30 ದಿನದಲ್ಲಿ ವಿಮೆ ಹಣ ಕೊಡುತ್ತೇವೆ. ದೇಶದ ಸಂವಿಧಾನ, ರೈತರ ಉಳುವಿಗೆ ಕಾಂಗ್ರೆಸ್​ ಬೆಂಬಲಿಸಿ ಎಂದು ಹೇಳಿದ್ದಾರೆ.

Advertisement

Advertisement
Tags :
Advertisement